HEALTH TIPS

ಟಿ20 ವಿಶ್ವಕಪ್: ನ್ಯೂಜಿಲೆಂಡ್ ಗೆ 8 ವಿಕೆಟ್ ಗಳ ಭರ್ಜರಿ ಜಯ, ಟೂರ್ನಿಯಿಂದ ಟೀಂ ಇಂಡಿಯಾ ಬಹುತೇಕ ಔಟ್!

             ದುಬೈ: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ನ್ಯೂಜಿಲೆಂಡ್ ವಿರುದ್ಧದ ನಿರ್ಣಾಯಕ ಪಂದ್ಯದಲ್ಲೂ ಟೀಂ ಇಂಡಿಯಾ ಮುಗ್ಗರಿಸಿದ್ದು, ಟೂರ್ನಿಯಿಂದ ಬಹುತೇಕ ಔಟ್ ಆದಂತಾಗಿದೆ.

             ನಿನ್ನೆ ನಡೆದ ಪಂದ್ಯದಲ್ಲಿ ಭಾರತದ ವಿರುದ್ಧ ನ್ಯೂಜಿಲೆಂಡ್ ತಂಡ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದ್ದು, ಆ ಮೂಲಕ ಟೂರ್ನಿಯಲ್ಲಿ ತನ್ನ ಹೋರಾಟವನ್ನು ಕಿವೀಸ್ ಪಡೆ ಜೀವಂತವಾಗಿರಿಸಿಕೊಂಡಿದೆ. 

               ಭಾರತ ನೀಡಿದ 111ರನ್ ಗಳ ಸುಲಭ ಗುರಿಯನ್ನು ಬೆನ್ನು ಹತ್ತಿದ ನ್ಯೂಜಿಲೆಂಡ್ ತಂಡ ಕೇವಲ 14.3 ಓವರ್ ನಲ್ಲಿಯೇ 2 ವಿಕೆಟ್ ಕಳೆದುಕೊಂಡು 111ರನ್ ಗಳಿಸಿ ಗುರಿ ಸಾಧಿಸಿತು. ಆ ಮೂಲಕ ಭಾರತದ ವಿರುದ್ಧ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿ ಟೂರ್ನಿಯಲ್ಲಿ ತನ್ನ ಸ್ಪರ್ಧೆಯನ್ನು ಜೀವಂತವಾಗಿರಿಸಿಕೊಂಡಿದೆ. 

              ಈ ಮಹತ್ವದ ಪಂದ್ಯದ ಸೋಲಿನ ಮೂಲಕ ಟೀಂ ಇಂಡಿಯಾ ಬಹುತೇಕ ಟೂರ್ನಿಯಿಂದ ಹೊರಬಿದ್ದಂತಾಗಿದೆ. ಸೂಪರ್ ಸಿಕ್ಸ್ ಹಂತದಲ್ಲಿ ಗ್ರೂಪ್ 2 ಹಂತದಲ್ಲಿ ಭಾರತ ತಂಡ ಇದೀಗ 5ನೇ ಸ್ಥಾನಕ್ಕೆ ಕುಸಿದಿದ್ದು, ಆಡಿರುವ ಮೂರು ಪಂದ್ಯಗಳಲ್ಲೂ ಜಯ ಗಳಿಸಿ 6 ಅಂಕಗಳಿಸಿರುವ ಪಾಕಿಸ್ತಾನ ಆಗ್ರಸ್ಥಾನಿಯಾಗಿ ಸೆಮಿಫೈನಲ್ ಗೇರಿದೆ. ಅಂತೆಯೇ ಆಡಿರುವ 3 ಪಂದ್ಯಗಳಲ್ಲಿ 2 ಪಂದ್ಯ ಗೆದ್ದಿರುವ ಆಫ್ಘಾನಿಸ್ತಾನ ಮತ್ತು ಆಡಿರುವ 2 ಪಂದ್ಯದಲ್ಲಿ 1 ಪಂದ್ಯ ಗೆದ್ದಿರುವ ನ್ಯೂಜಿಲೆಂಡ್ ನಡುವೆ ಸೆಮೀಸ್ ಸೆಣಸಾಟಕ್ಕಾಗಿ ಸ್ಪರ್ಧೆ ಏರ್ಪಟ್ಟಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries