ನವದೆಹಲಿ: ಪೆಟ್ರೋಲ್, ಡೀಸೆಲ್ ಸೇರಿದಂತೆ ಇಂಧನಗಳ ಮೇಲಿನ ಎಕ್ಸೈಸ್ ಸುಂಕವನ್ನು 2014ರಲ್ಲಿ ಯುಪಿಎ ಸರ್ಕಾರ ಇದ್ದಾಗ ಎಷ್ಟಿತ್ತೋ ಅದೇ ಮಟ್ಟಕ್ಕೆ ಇಳಿಸಬೇಕು ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಆಗ್ರಹಿಸಿದ್ದಾರೆ.
ನವದೆಹಲಿ: ಪೆಟ್ರೋಲ್, ಡೀಸೆಲ್ ಸೇರಿದಂತೆ ಇಂಧನಗಳ ಮೇಲಿನ ಎಕ್ಸೈಸ್ ಸುಂಕವನ್ನು 2014ರಲ್ಲಿ ಯುಪಿಎ ಸರ್ಕಾರ ಇದ್ದಾಗ ಎಷ್ಟಿತ್ತೋ ಅದೇ ಮಟ್ಟಕ್ಕೆ ಇಳಿಸಬೇಕು ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಆಗ್ರಹಿಸಿದ್ದಾರೆ.
ಇಂಧನ ದರ ಏರಿಕೆಗೆ ಸಂಬಂಧಿಸಿ ಟ್ವೀಟ್ ಮಾಡಿರುವ ಅವರು, 'ಮೋದಿಯವರಿಗೆ ನಿಜವಾಗಿಯೂ ಜನರಿಗೆ ಅನುಕೂಲ ಮಾಡಿಕೊಡಬೇಕೆಂಬ ಮನಸ್ಸಿದ್ದರೆ ಇಂಧನಗಳ ಮೇಲಿನ ಎಕ್ಸೈಸ್ ಸುಂಕವನ್ನು 2014ರಲ್ಲಿ ಯುಪಿಎ ಸರ್ಕಾರ ಇದ್ದಾಗ ಎಷ್ಟಿತ್ತೋ ಅದೇ ಮಟ್ಟಕ್ಕೆ ಇಳಿಸಲಿ. ಇದರಿಂದ ಪೆಟ್ರೋಲ್ ಹಾಗೂ ಡೀಸೆಲ್ ದರ ಇನ್ನೂ ₹18ರಷ್ಟು ಕಡಿಮೆಯಾಗಲಿದೆ. ಬಹುಶಃ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸೋಲನುಭವಿಸಿದ ಬಳಿಕ ಅವರು ಆ ನಿರ್ಧಾರ ಕೈಗೊಳ್ಳಬಹುದು' ಎಂದು ಉಲ್ಲೇಖಿಸಿದ್ದಾರೆ.
ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಎಕ್ಸೈಸ್ ಸುಂಕವನ್ನು ಕ್ರಮವಾಗಿ ₹5 ಮತ್ತು ₹10ರಷ್ಟು ಕಡಿತಗೊಳಿಸಿರುವುದಾಗಿ ಕೇಂದ್ರ ಸರ್ಕಾರ ಬುಧವಾರ ಘೋಷಿಸಿತ್ತು. ಆ ಬಳಿಕ ಕರ್ನಾಟಕವೂ ಸೇರಿದಂತೆ ಹಲವು ರಾಜ್ಯಗಳೂ ತೆರಿಗೆ ಕಡಿತ ನಿರ್ಧಾರ ಪ್ರಕಟಿಸಿದ್ದವು.