ಕಾಸರಗೋಡು: ಶೇಷವನ ಶ್ರೀ ಸುಬ್ರಹ್ಮಣ್ಯ ಸ್ವಾಮಿದೇವಸ್ಥಾನದ ಶೇಷವನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಟ್ರಸ್ಟ್ ನೇತೃತ್ವದಲ್ಲಿ ಶೇಷವನ ಶ್ರೀಸುಬ್ರಹ್ಮಣ್ಯ ಸ್ವಾಮಿ ಯುವಕ ಸಂಘದ ವತಿಯಿಂದ ನಿರ್ಮಾಣಗೊಂಡಿರುವ 'ಶೇಷವನ ಸ್ಕಂದ' ಗೋಶಾಲೆ ಲೋಕಾರ್ಪಣೆ ಕಾರ್ಯಕ್ರಮ ನ. 21ರಂದು ಬೆಳಗ್ಗೆ ಜರುಗಲಿದೆ. ಶ್ರೀ ಶಂಕರಾಚಾರ್ಯ ಸಂಸ್ಥಾನ ಶ್ರೀ ಎಡನೀರು ಮಠದ ಪರಮಪೂಜ್ಯ ಶ್ರೀ ಸಚ್ಚಿದಾನಂದ ಭಾರತೀ ಲೋಕಾರ್ಪಣೆಗೈಯುವರು. ಶ್ರೀಕ್ಷೇತ್ರದ ತಂತ್ರಿವರ್ಯರಾದ ಬ್ರಹ್ಮಶ್ರೀ ಅರವತ್‍ದಾಮೋದರ ತಂತ್ರಿ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಜರುಗಲಿರುವುದು.
ಈ ಸಂದರ್ಭ ಜರಗುವ ಧಾರ್ಮಿಕ ಸಭೆಯಲ್ಲಿ ಮಧೂರು ಕ್ಷೇತ್ರದ ಪ್ರಧಾನ ಅರ್ಚಕ ಶ್ರೀಕೃಷ್ಣಉಪಾದ್ಯಾಯ, ಕುತ್ಯಾಳ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಅನುವಂಶಿಕಮೊಕ್ತೇಸರರಾದ ಕೆ.ಜಿ. ಶ್ಯಾನುಭೋಗ್, ಮೊಗ್ರಾಲ್ ಪುತ್ತೂರು ಗ್ರಾಮಪಂಚಾಯಿತಿ ಸದಸ್ಯ ಸಂಪತ್ ಪೆರ್ನಡ್ಕ, ಶೇಷವನಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಟ್ರಸ್ಟ್ ಆಡಳಿತ ಮೊಕ್ತೇಸರರಾದ ಕಿರಣ್ ಪ್ರಸಾದ್ ಕೂಡ್ಲು, ಶೇಷವನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಟ್ರಸ್ಟ್ ಅನುವಂಶಿಕ ಮೊಕ್ತೇಸರ ಸದಾಶಿವ, ಶೇಷವನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಯುವಕ ಸಂಘದ ಅಧ್ಯಕ್ಷ ರಮೇಶ್ ಕಾಞÂರತ್ತಡಿ, ಶೇಷವನ ಸ್ಕಂದ ಗೋಶಾಲೆ ಸಂಚಾಲಕ ಮುರಳಿ ಪಾಲ್ಗೊಳ್ಳುವರು.