ಕಾಸರಗೋಡು: ಬಾಲವಿಜ್ಞಾನ ಕಾಂಗ್ರೆಸ್ ಜಿಲ್ಲಾ ಮಟ್ಟದ ಸ್ಪರ್ಧೆ ನ.25ರಂದು ಬೆಳಗ್ಗೆ 10 ಗಂಟೆಗೆ ಆನ್ ಲೈನ್ ರೂಪದಲ್ಲಿ ನಡೆಯಲಿದೆ. ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣ್ ವೀರ್ ಚಂದ್ ಉದ್ಘಾಟಿಸುವರು. ಆಯ್ದ ಜೂನಿಯರ್, ಸೀನಿಯರ್ ವಿಭಾಗಗಳ ತಂಡಗಳು ಭಾಗವಹಿಸಲಿವೆ. ಆಯ್ದ ಪ್ರಾಜೆಕ್ಟ್ ಗಳನ್ನು ಡಿ.3,4ರಂದು ನಡೆಯುವ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಪ್ರಸ್ತುತಪಡಿಸಲಾಗುವುದು. ನವೋದಯ, ಕೇಂದ್ರೀಯ ವಿದ್ಯಾಲಯ ವಿದ್ಯಾರ್ಥಿಗಳಿಗೆ ಈ ಸ್ಪರ್ಧೆಯಲ್ಲಿ ಭಾಗವಹಿಸುವ ಅವಕಾಶವಿಲ್ಲ.
.