HEALTH TIPS

ದೀಪಾವಳಿಗೂ ಮುನ್ನವೇ ಗ್ರಾಹಕರಿಗೆ ಬರೆ ಎಳೆದ ಎಲ್‌ಪಿಜಿ, 266 ರೂ. ಹೆಚ್ಚಳ

                   ನವದೆಹಲಿ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಳಿಕ ಇದೀಗ ಎಲ್‌ಪಿಜಿ ಸಿಲಿಂಡರ್ ದರ ಏರಿಕೆ ಮಾಡಿ ಗ್ರಾಹಕರಿಗೆ ಶಾಕ್ ನೀಡಿದೆ.

            ಬೆಲೆ ಏರಿಕೆಯಿಂದ ಈಗಾಗಲೇ ಗ್ರಾಹಕರ ಜೇಬು ಸುಡುತ್ತಿದೆ. ಇದೀಗ ದೀಪಾವಳಿಗೂ ಮುನ್ನ ಮತ್ತೆ ಬೆಲೆ ಏರಿಕೆ ಶಾಕ್ ಗ್ರಾಹಕರಿಗೆ ಎದುರಾಗಿದೆ. ನವೆಂಬರ್ ಮೊದಲ ದಿನವೇ ಪೆಟ್ರೋಲಿಯಂ ಕಂಪನಿಗಳು ಗ್ಯಾಸ್ ಬೆಲೆಯನ್ನು ಏರಿಸಿದೆ.

           ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ 265 ರೂ.ಯಷ್ಟು ಹೆಚ್ಚಾಗಿದೆ. ಈ ಹೆಚ್ಚಳವು ಕಮರ್ಷಿಯಲ್ ಸಿಲಿಂಡರ್‌ಗಳ ಮೇಲೆ ಅನ್ವಯವಾಗಲಿದೆ.

LPG Rates For Commercial Cylinders Hiked By Rs 266

           ಸೆಪ್ಟೆಂಬರ್ ಮತ್ತು ಅಕ್ಟೋಬರ್‌ನಲ್ಲಿಯೂ ಬೆಲೆ ಏರಿಕೆ : ಈ ಹಿಂದೆ ಸೆಪ್ಟೆಂಬರ್ ಮತ್ತು ಅಕ್ಟೋಬರ್‌ನಲ್ಲಿ ಕೂಡ ಪೆಟ್ರೋಲಿಯಂ ಕಂಪನಿಗಳು ಕಮರ್ಷಿಯಲ್ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸಿದ್ದವು.

          19 ಕೆಜಿಯ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಸೆಪ್ಟೆಂಬರ್ 1 ರಂದು 43 ರೂ ಮತ್ತು ಅಕ್ಟೋಬರ್ 1 ರಂದು 75 ರೂ ಹೆಚ್ಚಿಸಲಾಗಿತ್ತು. ಕಳೆದ ತಿಂಗಳು, ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಹೆಚ್ಚಳವಾಗಿತ್ತು.

             ದೆಹಲಿಯಲ್ಲಿ ಸಿಲಿಂಡರ್ ಬೆಲೆ 1998 ರೂ. ಏರಿಕೆ : 266 ರೂಪಾಯಿ ಹೆಚ್ಚಳದ ನಂತರ ದೆಹಲಿಯಲ್ಲಿ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆ 1998 ರೂ.ಗೆ ಏರಿದೆ. ಇದಕ್ಕೂ ಮೊದಲು ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆ (LPG Price) 1733 ರೂಪಾಯಿ ಇತ್ತು. ಮುಂಬೈನಲ್ಲಿ 19 ಕೆ.ಜಿ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆ 1950 ರೂ.ಆಗಿದೆ. ಕೋಲ್ಕತ್ತಾದಲ್ಲಿ 19 ಕೆಜಿ ಗ್ಯಾಸ್ ಸಿಲಿಂಡರ್ 2073.50 ರೂ ಆಗಿದ್ದರೆ, ಚೆನ್ನೈನಲ್ಲಿ 19 ಕೆಜಿ ಸಿಲಿಂಡರ್ 2133 ರೂ.ಗೆ ಲಭ್ಯವಾಗಲಿದೆ.

              ಪೆಟ್ರೋಲ್, ಡೀಸೆಲ್ ಬೆಲೆಯೂ ಏರಿಕೆ : ಈ ಮಧ್ಯೆ, ಪೆಟ್ರೋಲಿಯಂ ಕಂಪನಿಗಳು ಸಹ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು 35-35 ಪೈಸೆಗಳಷ್ಟು ಹೆಚ್ಚಿಸಿವೆ. ಈ ಹೆಚ್ಚಳದ ನಂತರ, ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 109.69 ರೂ.ಗೆ ಏರಿಕೆಯಾಗಿದ್ದು, ಡೀಸೆಲ್ 98.42 ರೂ.ಗೆ ಮಾರಾಟವಾಗುತ್ತಿದೆ.

            ಮುಂಬೈನಲ್ಲಿ ಪೆಟ್ರೋಲ್ ಬೆಲೆ 115.5 ರೂ ಮತ್ತು ಡೀಸೆಲ್ ಬೆಲೆ 106.62 ರೂ. ಆಗಿದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ 110.15 ರೂ ಮತ್ತು ಡೀಸೆಲ್ 101.56 ರೂ. ಗೆ ಮಾರಾಟವಾಗುತ್ತಿದ್ದರೆ, ಚೆನ್ನೈನಲ್ಲಿ ಪೆಟ್ರೋಲ್ ಬೆಲೆ 106.35 ಮತ್ತು ಡೀಸೆಲ್ ಬೆಲೆ 102.59 ಯಷ್ಟಾಗಿದೆ.

         ಇರುವುದರಲ್ಲಿ ಒಂದು ಸಮಾಧಾನ ಎಂದರೆ 14.2 ಕೆಜಿ ತೂಕದ ಮನೆ ಬಳಕೆ ಎಲ್​ಪಿಜಿ ಸಿಲಿಂಡರ್​​ ಬೆಲೆಯಲ್ಲಿ ಯಾವುದೇ ಹೆಚ್ಚಳ ಮಾಡಲಾಗಿಲ್ಲ. ದೆಹಲಿಯಲ್ಲಿ 14.2 ಕೆಜಿ ತೂಕದ ಎಲ್​ಪಿಜಿ ಸಿಲಿಂಡರ್​ ಬೆಲೆ (ಸಬ್ಸಿಡಿ ರಹಿತ) 899.50 ರೂ. ಇದೆ. ಕೋಲ್ಕತ್ತದಲ್ಲಿ 926 ರೂ.ಇದ್ದರೆ, ಚೆನ್ನೈನಲ್ಲಿ 915.50 ರೂಪಾಯಿ ಇದೆ.

              ಹಾಗೇ, ಕೊನೇ ಬಾರಿಕೆ ಮನೆ ಬಳಕೆ ಸಿಲಿಂಡರ್ ಬೆಲೆಯನ್ನು ಅಕ್ಟೋಬರ್ 6ರಂದು ಏರಿಸಲಾಗಿತ್ತು. ಹಾಗೇ ಕಮರ್ಷಿಯಲ್​ ಸಿಲಿಂಡರ್​ ಬೆಲೆಯನ್ನು ಅಕ್ಟೋಬರ್​ 1ರಂದು ಹೆಚ್ಚಿಸಲಾಗಿತ್ತು. ಇದೀಗ ಆದ ಹೆಚ್ಚಳದಿಂದ ಹಲವು ನಗರಗಳಲ್ಲಿ ಬೆಲೆ 2000 ರೂಪಾಯಿ ಗಡಿ ದಾಟಿದ್ದು ಹೊರೆಯೇ ಆಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries