ಗಡ್ ಚಿರೋಲಿ: ಮಹಾರಾಷ್ಟ್ರದ ಗಡ್ ಚಿರೋಲ್ ಜಿಲ್ಲೆಯಲ್ಲಿ ನಡೆದ ಪೊಲೀಸರೊಂದಿಗಿನ ಎನ್ ಕೌಂಟರ್ ನಲ್ಲಿ ಕನಿಷ್ಠ 26 ನಕ್ಸಲೀಯರನ್ನು ಹತ್ಯೆ ಮಾಡಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅರಣ್ಯದಿಂದ 26 ನಕ್ಸಲೀಯರ ಮೃತದೇಹಗಳನ್ನು ವಶಕ್ಕೆ ಪಡೆದಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಕಿತ್ ಗೋಯಲ್ ಹೇಳಿದ್ದಾರೆ.
ಹೆಚ್ಚುವರಿ ಎಸ್ ಪಿ ಸೌಮ್ಯ ಮುಂಡೆ ನೇತೃತ್ವದಲ್ಲಿ ಸಿ-60 ಪೊಲೀಸ್ ಕಮಾಂಡೋ ಪಡೆ ಶೋಧ ಕಾರ್ಯ ನಡೆಸುತ್ತಿದ್ದಾಗ ಮರ್ಡಿಂಟೋಲಾ ಅರಣ್ಯ ಪ್ರದೇಶದ ಕೊರ್ಚಿಯಲ್ಲಿ ಇಂದು ಬೆಳಗ್ಗೆ ಎನ್ ಕೌಂಟರ್ ನಡೆದಿರುವುದಾಗಿ ಗೋಯಲ್ ತಿಳಿಸಿದ್ದಾರೆ. ಹತ್ಯೆಗೀಡಾದ ನಕ್ಸಲೀಯರ ಪತ್ತೆ ಇನ್ನೂ ಧೃಡಪಟ್ಟಿಲ್ಲ. ಉನ್ನತ ನಕ್ಸಲ್ ಮುಖಂಡನೊಬ್ಬ ಸಾವನ್ನಪ್ಪಿರುವ ಬಗ್ಗೆ ಮೂಲಗಳು ಶಂಕೆ ವ್ಯಕ್ತಪಡಿಸಿವೆ.
ಕಾರ್ಯಾಚರಣೆ ವೇಳೆಯಲ್ಲಿ ನಾಲ್ವರು ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಹೆಲಿಕಾಪ್ಟರ್ ಮೂಲಕ ನಾಗಪುರಕ್ಕೆ ಕರೆದೊಯ್ಯಲಾಗಿದೆ ಎಂದು ಅಧಿಕಾರಿಯೊಬ್ಬರು ಹಿಂದೆ ತಿಳಿಸಿದ್ದರು. ಗಡ್ ಚಿರೋಲಿ ಛತ್ತೀಸ್ ಗಡದ ಗಡಿಯಲ್ಲಿ ಬರುತ್ತದೆ.