ನವದೆಹಲಿ :ಕೋವಿಡ್ ಸಾಂಕ್ರಾಮಿಕ ಸಂದರ್ಭದಲ್ಲಿ ಸರಕಾರ ಲಾಕ್ ಡೌನ್ ಹೇರಿದ್ದ ವೇಳೆ ಜನಸಾಮಾನ್ಯರಿಗೆ ಉಚಿತ ಪಡಿತರ ವಿತರಿಸುವುದಾಗಿ ಘೋಷಿಸಲಾಗಿತ್ತು. ಆದರೆ ನವಂಬರ್ 30ರ ಬಳಿಕ ಇದನ್ನು ಮುಂದುವರಿಸುವ ಪ್ರಸ್ತಾವವನ್ನು ಕೇಂದ್ರ ಸರಕಾರ ಹೊಂದಿಲ್ಲ ಎಂದು ಕೇಂದ್ರ ಆಹಾರ ಕಾರ್ಯದರ್ಶಿ ಸುಧಾಂಶು ಪಾಂಡೆ ಶುಕ್ರವಾರ ಹೇಳಿಕೆ ನೀಡಿದ್ದಾರೆ.
ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ (PMGKAY) ಮೂಲಕ ಉಚಿತ ಪಡಿತರ ವಿತರಣೆಯನ್ನು ನವೆಂಬರ್ 30 ರ ನಂತರ ವಿಸ್ತರಿಸಲು ಕೇಂದ್ರವು ಯಾವುದೇ ಪ್ರಸ್ತಾಪವನ್ನು ಹೊಂದಿಲ್ಲ. ಇದು ಆರ್ಥಿಕತೆಯಲ್ಲಿ ಚೇತರಿಕೆಗೆ ಮತ್ತು ಮುಕ್ತ ಮಾರುಕಟ್ಟೆಯಲ್ಲಿ ಆಹಾರ ಧಾನ್ಯಗಳ ಉತ್ತಮ ವಿಲೇವಾರಿಯ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕೋವಿಡ್-19 ನಿಂದ ಉಂಟಾದ ಸಂಕಷ್ಟವನ್ನು ನಿವಾರಿಸಲು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (PMKGAY) ಅನ್ನು ಕಳೆದ ವರ್ಷ ಮಾರ್ಚ್‌ನಲ್ಲಿ ಘೋಷಿಸಲಾಯಿತು. ಆರಂಭದಲ್ಲಿ, ಈ ಯೋಜನೆಯನ್ನು ಏಪ್ರಿಲ್-ಜೂನ್ 2020 ಅವಧಿಗೆ ಪ್ರಾರಂಭಿಸಲಾಯಿತು ಆದರೆ ನಂತರ ಅದನ್ನು ನವೆಂಬರ್ 30, 2021 ರವರೆಗೆ ವಿಸ್ತರಿಸಲಾಗಿತ್ತು.