ತಿರುವನಂತಪುರಂ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಜೊತೆಗೆ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮತ್ತೊಂದು ವಾಯುಭಾರ ಕುಸಿತ ಆತಂಕಕಾರಿಯಾಗಿದೆ.
ಬುಧವಾರ(ಇಂದು) ಮುಂಜಾನೆ ಬಂಗಾಳ ಕೊಲ್ಲಿಯ ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ಹೊಸ ವಾಯುಭಾರ ಕುಸಿತ ಹುಟ್ಟಿಕೊಂಡಿದ್ದು ಕಡಿಮೆ ಆಗಿದ್ದು, ನಂತರ ಮಹಾರಾಷ್ಟ್ರದ ಕರಾವಳಿಯಲ್ಲಿ ಅರಬ್ಬಿ ಸಮುದ್ರದಲ್ಲಿ ಮತ್ತೊಂದು ವಾಯುಭಾರ ಕುಸಿತ ಉಂಟಾಗಿದೆ. ಡಿಸೆಂಬರ್ 3ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಹೊಸ ವಾಯುಭಾರ ಕುಸಿತ ಬಂಗಾಳಕೊಲ್ಲಿಯನ್ನು ಪ್ರವೇಶಿಸಿ 48 ಗಂಟೆಗಳಲ್ಲಿ ತೀವ್ರ ಕಡಿಮೆ ಒತ್ತಡವಾಗಿ ಪರಿವರ್ತನೆಯಾಗುವ ನಿರೀಕ್ಷೆಯಿದೆ. ಇದೇ ವೇಳೆ ಅರಬ್ಬಿ ಸಮುದ್ರದಲ್ಲಿ ರಚನೆಯಾಗುವ ಸಾಧ್ಯತೆಯಿರುವ ಹೊಸ ಚಂಡಮಾರುತದ ಪಥವನ್ನು ಲೆಕ್ಕ ಹಾಕಲಾಗಿಲ್ಲ.
ಮಾಲ್ಡೀವ್ಸ್ ಮತ್ತು ಲಕ್ಷದ್ವೀಪದ ಬಳಿ ವಾಯುಭಾರ ಕುಸಿತ ಮತ್ತು ಚಂಡಮಾರುತದ ಕಾರಣ ಕೇರಳ ಲಕ್ಷದ್ವೀಪ ಮತ್ತು ಕರ್ನಾಟಕದ ಕರಾವಳಿಯಲ್ಲಿ ಮೀನುಗಾರಿಕೆಯನ್ನು ನಿಷೇಧಿಸಿದೆ.