ತಿರುವನಂತಪುರ: ಕೇರಳದಲ್ಲಿ ಇಂದು 5848 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಎರ್ನಾಕುಳಂ 919, ಕೋಝಿಕ್ಕೋಡ್ 715, ತಿರುವನಂತಪುರ 650, ತ್ರಿಶೂರ್ 637, ಕೊಲ್ಲಂ 454, ಕೊಟ್ಟಾಯಂ 383, ಕಣ್ಣೂರು 376, ವಯನಾಡ್ 335, ಪಾಲಕ್ಕಾಡ್ 287, ಇಡುಕ್ಕಿ 269, ಮಲಪ್ಪುರಂ 251, ಪತ್ತನಂತಿಟ್ಟ 244, ಆಲಪ್ಪುಳ 218, ಕಾಸರಗೋಡು 110 ಎಂಬಂತೆ ಕೋವಿಡ್ ದೃಢಪಡಿಸಲಾಗಿದೆ.
ಕಳೆದ 24 ಗಂಟೆಗಳಲ್ಲಿ 63,463 ಮಾದರಿಗಳನ್ನು ಪರೀಕ್ಷಿಸಲಾಗಿದೆ. ವಾರದ ಸೋಂಕಿನ ಜನಸಂಖ್ಯೆಯ ಅನುಪಾತ 10 ಕ್ಕಿಂತ ಹೆಚ್ಚಿನ 39 ಸ್ಥಳೀಯ ಸಂಸ್ಥೆಗಳಲ್ಲಿ 46 ವಾರ್ಡ್‍ಗಳಿವೆ. ಇಲ್ಲಿ ಕಟ್ಟುನಿಟ್ಟಿನ ನಿಯಂತ್ರಣ ಇರಲಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರಸ್ತುತ 2,26,642 ಮಂದಿ ಜನರು ನಿಗಾದಲ್ಲಿದ್ದಾರೆ. ಇವರಲ್ಲಿ 2,21,139 ಮಂದಿ ಮನೆ/ ಸಾಂಸ್ಥಿಕ ಕ್ವಾರಂಟೈನ್‍ನಲ್ಲಿದ್ದಾರೆ ಮತ್ತು 5503 ಮಂದಿ ಆಸ್ಪತ್ರೆಗಳಲ್ಲಿ ನಿಗಾದಲ್ಲಿದ್ದಾರೆ. ಒಟ್ಟು 362 ಮಂದಿ ಹೊಸದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಸ್ತುತ, 67,185 ಕೊರೋನಾ ಪ್ರಕರಣಗಳಲ್ಲಿ, ಕೇವಲ 6.8 ಶೇಕಡಾದಷ್ಟು ಮಾತ್ರ ಆಸ್ಪತ್ರೆಗಳು /ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಕಳೆದ 24 ಗಂಟೆಗಳಲ್ಲಿ ಕೋವಿಡ್ ಬಾಧಿಸಿದ 46 ಮಂದಿ ಮೃತಪಟ್ಟಿದ್ದಾರೆ. ಅಲ್ಲದೆ, ಸುಪ್ರೀಂ ಕೋರ್ಟ್‍ನ ಹೊಸ ಮಾರ್ಗಸೂಚಿಗಳ ಅಡಿಯಲ್ಲಿ ಕೇಂದ್ರ ಸರ್ಕಾರವು ಮೇಲ್ಮನವಿ ಸಲ್ಲಿಸಿದ 19 ಸಾವುಗಳು ವರದಿಯಾಗಿವೆ. ಇದರಿಂದ ರಾಜ್ಯದಲ್ಲಿ ಒಟ್ಟು ಸಾವಿನ ಸಂಖ್ಯೆ 35,750ಕ್ಕೆ ಏರಿಕೆಯಾಗಿದೆ.
ಇಂದು ಸೋಂಕು ಪತ್ತೆಯಾದವರಲ್ಲಿ 12 ಮಂದಿ ಹೊರ ರಾಜ್ಯದವರು. 5478 ಮಂದಿಗೆ ಸಂಪರ್ಕದಿಂದ ಸೋಂಕಿಗೆ ಒಳಗಾಗಿದ್ದಾರೆ. 341 ಮಂದಿಯ ಸಂಪರ್ಕ ಮೂಲ ಸ್ಪಷ್ಟವಾಗಿಲ್ಲ. ಹದಿನೇಳು ಆರೋಗ್ಯ ಕಾರ್ಯಕರ್ತರಿಗೆ ಸೋಂಕು ದೃಢಪಡಿಸಲಾಗಿದೆ.
ರೋಗನಿರ್ಣಯ ಮತ್ತು ಚಿಕಿತ್ಸೆ ಪಡೆದ 7228 ಮಂದಿ ಜನರು ಗುಣಮುಖರಾಗಿದ್ದಾರೆ. ತಿರುವನಂತಪುರ 992, ಕೊಲ್ಲಂ 695, ಪತ್ತನಂತಿಟ್ಟ 503, ಆಲಪ್ಪುಳ 222, ಕೊಟ್ಟಾಯಂ 462, ಇಡುಕ್ಕಿ 325, ಎರ್ನಾಕುಳಂ 826, ತ್ರಿಶೂರ್ 869, ಪಾಲಕ್ಕಾಡ್ 348, ಮಲಪ್ಪುರಂ 345, ಕೋಝಿಕ್ಕೋಡ್ 788, ವಯನಾಡ್ 333, ಕಣ್ಣೂರು 411, ಕಾಸರಗೋಡು 109 ಎಂಬಂತೆ ಗುಣಮುಖರಾಗಿದ್ದಾರೆ. ಇದರೊಂದಿಗೆ 67,185 ಮಂದಿ ಜನರಿಗೆ ಕೋವಿಡ್ ಪತ್ತೆಯಾಗಿದ್ದು, ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 49,57,509 ಮಂದಿ ಜನರು ಕೊರೊನಾದಿಂದ ಮುಕ್ತರಾಗಿದ್ದಾರೆ.