ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೇ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಶಾಸಕರೊಬ್ಬರು ವಿಧಾನಸಭೆಯಲ್ಲಿ ಕೇಳಿದ್ದ ಪ್ರಶ್ನೆಗೆ ಉತ್ತರಿಸುತ್ತಾ ಪಿಣರಾಯಿ ವಿಜಯನ್ ಈ ವಿವರ ನೀಡಿದ್ದಾರೆ.
ರಾಜ್ಯದಲ್ಲಿ ಪೊಲೀಸರು ಕ್ರಿಮಿನಲ್ ದೌರ್ಜನ್ಯಗಳಲ್ಲಿ ಭಾಗಿಯಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆತಂಕ ವ್ಯಕ್ತವಾಗಿದೆ. ಹೀಗಾಗಿ ತಾವು ವಿಧಾನಸಭೆಯಲ್ಲಿ ಪ್ರಶ್ನೆ ಕೇಳಿದ್ದಾಗಿ ಶಾಸಕ ರೆಮ ಅವರು ತಿಳಿಸಿದ್ದಾರೆ. ಪೊಲೀಸರ ಸಮೂಹದಲ್ಲೇ ಕ್ರಿಮಿನಲ್ ಗಳು ಇದ್ದಾರೆ ಎನ್ನುವುದು ಆತಂಕದ ಸಂಗತಿ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.