ತಿರುವನಂತಪುರ: ರಾಜ್ಯದಲ್ಲಿ ಇಂದು 7540 ಮಂದಿ ಜನರಿಗೆ ಕೋವಿಡ್-19 ದೃಢಪಟ್ಟಿದೆ. ಎರ್ನಾಕುಳಂ 1151, ತಿರುವನಂತಪುರ 1083, ಕೊಟ್ಟಾಯಂ 812, ಕೋಝಿಕ್ಕೋಡ್ 806, ತ್ರಿಶೂರ್ 802, ವಯನಾಡ್ 444, ಇಡುಕ್ಕಿ 408, ಕೊಲ್ಲಂ 401, ಪತ್ತನಂತಿಟ್ಟ 348, ಕಣ್ಣೂರು 335, ಅಲಪ್ಪುಳಂ 326, ಪಾಲಕ್ಕಾಡ್ 287, ಮಲಪ್ಪುರಂ 173, ಕಾಸರಗೋಡು 164 ಎಂಬಂತೆ ಸೋಂಕು ದೃಢಪಡಿಸಲಾಗಿದೆ.
ಕಳೆದ 24 ಗಂಟೆಗಳಲ್ಲಿ 76,380 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಸಾಪ್ತಾಹಿಕ ಸೋಂಕಿನ ಜನಸಂಖ್ಯೆ ಅನುಪಾತ (WIPR) 10 ಕ್ಕಿಂತ ಹೆಚ್ಚಿರುವ 39 ಸ್ಥಳೀಯ ಸಂಸ್ಥೆಗಳಲ್ಲಿ 46 ವಾರ್ಡ್ ಗಳಿವೆ. ಇಲ್ಲಿ ಕಟ್ಟುನಿಟ್ಟಿನ ನಿಯಂತ್ರಣ ಇರಲಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರಸ್ತುತ 2,21,733 ಮಂದಿ ಜನರು ನಿಗಾದಲ್ಲಿದ್ದಾರೆ. ಇವರಲ್ಲಿ 2,16,046 ಮಂದಿ ಮನೆ/ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿದ್ದಾರೆ ಮತ್ತು 5,687 ಮಂದಿ ಆಸ್ಪತ್ರೆಯ ನಿಗಾದಲ್ಲಿದ್ದಾರೆ. ಜೊತೆಗೆ 400 ಮಂದಿ ಹೊಸದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪ್ರಸ್ತುತ, 70,459 ಕೋವಿಡ್ ಪ್ರಕರಣಗಳಲ್ಲಿ, ಕೇವಲ 7 ಪ್ರತಿಶದಷ್ಟು ಜನರು ಮಾತ್ರ ಆಸ್ಪತ್ರೆಗಳು / ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದಾರೆ.
ಕಳೆದ 24 ಗಂಟೆಗಳಲ್ಲಿ 48 ಮಂದಿ ಕೋವಿಡ್ ಬಾಧಿಸಿ ಮೃತರಾಗಿದ್ದಾರೆ. ಇದಲ್ಲದೆ, ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕೇಂದ್ರ ಸರ್ಕಾರದ ಹೊಸ ಮಾರ್ಗಸೂಚಿಗಳ ಅಡಿಯಲ್ಲಿ ಮೇಲ್ಮನವಿ ಸಲ್ಲಿಸಿದ 211 ಸಾವುಗಳು ವರದಿಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸಾವಿನ ಸಂಖ್ಯೆ 34,621ಕ್ಕೆ ಏರಿಕೆಯಾಗಿದೆ.
ಇಂದು ಸೋಂಕು ಪತ್ತೆಯಾದವರಲ್ಲಿ 30 ಮಂದಿ ಹೊರ ರಾಜ್ಯದವರು. ಸಂಪರ್ಕದಿಂದ 7077 ಮಂದಿ ಜನರು ಸೋಂಕಿಗೆ ಒಳಗಾಗಿದ್ದಾರೆ. 386 ಮಂದಿಯ ಸಂಪರ್ಕ ಮೂಲ ಸ್ಪಷ್ಟವಾಗಿಲ್ಲ. 47 ಮಂದಿ ಆರೋಗ್ಯ ಕಾರ್ಯಕರ್ತರಿಗೆ ಇಂದು ಕೋವಿಡ್ ದೃಢಪಡಿಸಲಾಗಿದೆ.
ಇಂದು ಸೋಂಕು ಪತ್ತೆಯಾದ 7841 ಮಂದಿ
ಚಿಕಿತ್ಸೆ ಪಡೆದು, ಗುಣಮುಖರಾಗಿದ್ದಾರೆ. ತಿರುವನಂತಪುರ 951, ಕೊಲ್ಲಂ 661, ಪತ್ತನಂತಿಟ್ಟ 410, ಆಲಪ್ಪುಳ 254, ಕೊಟ್ಟಾಯಂ 212, ಇಡುಕ್ಕಿ 341, ಎರ್ನಾಕುಳಂ 964, ತ್ರಿಶೂರ್ 1879, ಪಾಲಕ್ಕಾಡ್ 332, ಮಲಪ್ಪುರಂ 392, ಕೋಝಿಕ್ಕೋಡ್ 606, ವಯನಾಡ್ 291, ಕಣ್ಣೂರು 417, ಕಾಸರಗೋಡು 131 ಎಂಬಂತೆ ಗುಣಮುಖರಾಗಿದ್ದಾರೆ. ಇದರೊಂದಿಗೆ 70,459 ಮಂದಿಗೆ ಸೋಂಕು ದೃಢಪಟ್ಟಿದ್ದು, ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 49,22,834 ಮಂದಿ ಕೋವಿಡ್‌ನಿಂದ ಮುಕ್ತರಾಗಿದ್ದಾರೆ.