ದುಬೈ: ತೀವ್ರ ಕುತೂಹಲ ಕೆರಳಿಸಿದ್ದ ಟಿ-20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು 8 ವಿಕೆಟ್ ಗಳಿಂದ ಮಣಿಸಿದ ಆಸ್ಟ್ರೇಲಿಯಾ, ಚೊಚ್ಚಲ ಬಾರಿಗೆ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು.
ಇಲ್ಲಿನ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ ನಾಯಕ ಕೇನ್ ವಿಲಿಯಮ್ಸ್ ನ್ ಅವರ ಅರ್ಧಶತಕದ ನೆರವಿನಿಂದ ನಾಲ್ಕು ವಿಕೆಟ್ ನಷ್ಟಕ್ಕೆ ಸವಾಲಿನ 172 ರನ್ ಗಳಿಸಿತು.
ನ್ಯೂಜಿಲೆಂಡ್ ನೀಡಿದ ಬೃಹತ್ ರನ್ ಗಳ ಗುರಿಯನ್ನು ಬೆನ್ನಟ್ಟಿದ್ದ ಆಸ್ಟ್ರೇಲಿಯಾ ತಂಡ ಡೇವಿಡ್ ವಾರ್ನರ್ ಅವರ 53 ಮತ್ತು ಮಿಚೆಲ್ ಮಾರ್ಷ್ ಅವರ ಆಕರ್ಷಕ 77 ರನ್ ಗಳ ನೆರವಿನಿಂದ ಇನ್ನೂ ಏಳು ಎಸೆತ ಬಾಕಿ ಇರುವಾಗಲೇ 8 ವಿಕೆಟ್ ಗಳಿಂದ 173 ರನ್ ಗಳಿಸುವ ಮೂಲಕ ಗೆಲುವಿನ ನಗೆ ಬೀರಿತು.
ಈ ಮೂಲಕ ಚೊಚ್ಚಲ ಬಾರಿಗೆ ಟಿ-20 ವಿಶ್ವಕಪ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು.ನ್ಯೂಜಿಲೆಂಡ್ ವಿಶ್ವಕಪ್ ಕನಸು ಮತ್ತೊಮ್ಮೆ ಭಗ್ನಗೊಂಡಿತು