ಚೆನ್ನೈ: ತಮಿಳುನಾಡಿನ ವೆಲ್ಲೂರು ಜಿಲ್ಲೆಯಲ್ಲಿ ಭಾರೀ ಮಳೆಗೆ ಮನೆ ಕುಸಿದುಬಿದ್ದ ಪರಿಣಾಮ ನಾಲ್ಕು ಮಕ್ಕಳು ಸೇರಿದಂತೆ ಒಂಬತ್ತು ಜನ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಚೆನ್ನೈ: ತಮಿಳುನಾಡಿನ ವೆಲ್ಲೂರು ಜಿಲ್ಲೆಯಲ್ಲಿ ಭಾರೀ ಮಳೆಗೆ ಮನೆ ಕುಸಿದುಬಿದ್ದ ಪರಿಣಾಮ ನಾಲ್ಕು ಮಕ್ಕಳು ಸೇರಿದಂತೆ ಒಂಬತ್ತು ಜನ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಅಗ್ನಿಶಾಮಕ, ರಕ್ಷಣಾ ಸಿಬ್ಬಂದಿ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಗೊಂಡವರನ್ನು ಹೊರತೆಗೆದು, ಆಸ್ಪತ್ರೆಗೆ ದಾಖಲಿಸಿದ್ದಾರೆ.
ಗಾಯಗೊಂಡ 9 ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ಪೆರ್ನಂಬಟ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಘೋಷಿಸಿದ್ದಾರೆ.
ಕಳೆದ ವಾರ ಸುರಿದ ಭಾರೀ ಮಳೆಗೆ ತಮಿಳುನಾಡು ರಾಜಧಾನಿ ಚೆನ್ನೈ ಕೂಡ ಜಲಾವೃತವಾಗಿತ್ತು.