HEALTH TIPS

ಷಾಪಿಂಗ್’ನಿಂದ ಮರಳುವಾಗ ಅಪಘಾತಕ್ಕೆ ಕುಟುಂಬವೇ ಬಲಿ

               ಸತನಾ : ಭೀಕರ ಅಪಘಾತದಲ್ಲಿ ಅಪ್ಪ-ಅಮ್ಮ ಸೇರಿ ಇಬ್ಬರು ಕಂದಮ್ಮಗಳೂ ಬಲಿಯಾಗಿದ್ದು, ಇಡೀ ಕುಟುಂಬವೇ ಬಲಿಯಾಗಿದೆ. ಭಯಾನಕ ಘಟನೆ ಮಧ್ಯಪ್ರದೇಶದ ಸತನಾದಲ್ಲಿ ನಡೆದಿದೆ.

             ಸತ್ಯಂ ಉಪಾಧ್ಯಾಯ ಕುಟುಂಬ ದುರಂತ ಅಂತ್ಯ ಕಂಡಿದೆ. ಕಾರಿನಲ್ಲಿ ಕುಟುಂಬದ ಸದಸ್ಯರು ಷಾಪಿಂಗ್‌ಗೆ ಹೋಗಿದ್ದರು. ಷಾಪಿಂಗ್‌ ಮುಗಿಸಿ ಮನೆಗೆ ವಾಪಸಾಗುವ ಸಂದರ್ಭದಲ್ಲಿ ಟ್ರಕ್​ ಕಾರಿಗೆ ಡಿಕ್ಕಿ ಹೊಡೆದಿದೆ. ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ನಾಲ್ವರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕೇಸು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

           ದುರ್ಘಟನೆಗೆ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್​ ಚೌಹಾಣ್​ ಟ್ವೀಟ್‌ ಮಾಡಿದ್ದು, ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಅಪಘಾತದ ಸುದ್ದಿ ಕೇಳಿ ಆಘಾತವಾಗಿದ್ದು, ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬಸ್ಥರಿಗೆ ಭಗವಂತ ಈ ನೋವು ಭರಿಸುವ ಶಕ್ತಿ ನೀಡಲಿ’ ಎಂದು ಪ್ರಾರ್ಥಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries