ನವದೆಹಲಿ: ದಕ್ಷಿಣ ಆಫ್ರಿಕಾದ ವಿಜ್ಞಾನಿಗಳು ಪತ್ತೆಮಾಡಿರುವ ಕೋವಿಡ್-19 ಹೊಸ ರೂಪಾಂತರ 'ಬಿ.1.1.529' ದೇಶದಲ್ಲಿ ಈವರೆಗೆ ಪತ್ತೆಯಾಗಿಲ್ಲ ಎಂದು ವರದಿಯಾಗಿದೆ.
ನವದೆಹಲಿ: ದಕ್ಷಿಣ ಆಫ್ರಿಕಾದ ವಿಜ್ಞಾನಿಗಳು ಪತ್ತೆಮಾಡಿರುವ ಕೋವಿಡ್-19 ಹೊಸ ರೂಪಾಂತರ 'ಬಿ.1.1.529' ದೇಶದಲ್ಲಿ ಈವರೆಗೆ ಪತ್ತೆಯಾಗಿಲ್ಲ ಎಂದು ವರದಿಯಾಗಿದೆ.
ಹೊಸ ರೂಪಾಂತರ ಭಾರತದಲ್ಲಿ ಪತ್ತೆಯಾಗಿಲ್ಲ ಎಂದು ಅಧಿಕೃತ ಮೂಲಗಳ ಹೇಳಿಕೆ ಉಲ್ಲೇಖಿಸಿ 'ಎಎನ್‌ಐ' ಸುದ್ದಿಸಂಸ್ಥೆ ವರದಿ ಮಾಡಿದೆ.
ಹೊಸದಾಗಿ ಪತ್ತೆಯಾಗಿರುವ ರೂಪಾಂತರವು ಅಸಾಮಾನ್ಯವಾಗಿದ್ದು, ದೇಹದ ಪ್ರತಿಕಾಯಗಳಿಂದ ತಪ್ಪಿಸಿಕೊಂಡು, ಹೆಚ್ಚಾಗಿ ವ್ಯಾಪಿಸುವ ಸಾಮರ್ಥ್ಯ ಹೊಂದಿದೆ ಎಂದು ಆಫ್ರಿಕಾ ವಿಜ್ಞಾನಿಗಳು ತಿಳಿಸಿದ್ದರು.
ಆಫ್ರಿಕಾ ವಿಜ್ಞಾನಿಗಳು ಮಾಹಿತಿ ಬಹಿರಂಗಪಡಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರವು ಹೊಸದಾಗಿ ಸಲಹೆ ಸೂಚನೆಗಳನ್ನು ನೀಡಿದ್ದು, ದಕ್ಷಿಣ ಆಫ್ರಿಕಾ, ಹಾಂಕಾಂಗ್, ಬೋಟ್ಸ್‌ವಾನಾಗಳಿಂದ ಬರುವ ಪ್ರಯಾಣಿಕರ ಪರೀಕ್ಷೆ ಹಾಗೂ ಸ್ಕ್ರೀನಿಂಗ್ ತೀವ್ರಗೊಳಿಸುವಂತೆ ಕೇಂದ್ರ ಸೂಚಿಸಿದೆ.