ಕಾಸರಗೋಡು: ಫ್ಯಾಶನ್ ಗೋಲ್ಡ್ ಜ್ಯುವೆಲ್ಲರಿ ಹೆಸರಲ್ಲಿ ಠೇವಣಿ ಸ್ವೀಕರಿಸಿ ಭಾರಿ ಪ್ರಮಾಣದ ವಂಚನೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಶಿದರ ಠೇವಣಿದಾರರು ಎರಡನೇ ಹಂತದ ಹೋರಾಟಕ್ಕೆ ಮುಂದಾಗಿದ್ದಾರೆ.
ಠೇವಣಿದಾರರು ಹೂಡಿರುವ ಹಣದೊಂದಿಗೆ ನಷ್ಟ ಪರಿಹಾರ ಒದಗಿಸಬೇಕು, ಆರೋಪಿಗಳೆಂದು ಗುರುತಿಸಲಾದ ಎಂಟು ಮಂದಿಯನ್ನೂ ಬಂಧಿಸಬೇಕು, ಸಂಸ್ಥೆಯ ನಿರ್ದೇಶಕರು ಮತ್ತು ಕಚೇರಿ ಸಿಬ್ಬಂದಿಯನ್ನು ಆರೋಪ ಪಟ್ಟಿಯಲ್ಲಿ ಸೇರಿಸಿ ಅವರನ್ನು ತನಿಖೆಗೆ ಒಳಪಡಿಸಬೇಕು, ಸಂಸ್ಥೆಯ ಸ್ವದೇಶಿ ಹಾಗೂ ವಿದೇಶಿ ಬೇನಾಮಿ ವ್ಯವಹಾರ ಪತ್ತೆಹಚ್ಚಬೇಕು ಮುಂತಾದ ಬೇಡಿಕೆ ಮುಂದಿರಿಸಿ ಚಳವಳಿಗೆ ತೀರ್ಮಾನಿಸಲಾಗಿದೆ. ಈ ನಿಟ್ಟಿನಲ್ಲಿ ನ. 14ರಂದು ಬೆಳಗ್ಗೆ 10ಕ್ಕೆ ಕಾಸರಗೋಡು ಕೋ ಓಪರೇಟಿವ್ ಬ್ಯಾಂಕ್ ಸಭಾಂಗಣದಲ್ಲಿ ಹೋರಾಟ ಸಮಿತಿ ಸಭೆ ನಡೆಸಿ, ಹೋರಾಟದ ರೂಪುರೇಷೆ ತಯಾರಿಸಲು ಸಮಿತಿ ತೀರ್ಮಾನಿಸಿದೆ. ಪ್ರಕರಣವನ್ನು ಸಿಬಿಐಗೆ ವಹಿಸಿಕೊಡುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಪದಾಧಿಕಾರಿಗಳು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.