ತಿರುವನಂತಪುರಂ: ಕೇಂದ್ರ ಸರ್ಕಾರ ತೆರಿಗೆ ಇಳಿಸಿದಂತೆ ರಾಜ್ಯವೂ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯನ್ನು ಇಳಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಕೆ.ಸುಧಾಕರನ್ ಹೇಳಿದ್ದಾರೆ. ರಾಜ್ಯ ತೆರಿಗೆ ಕಡಿತ ಮಾಡದಿದ್ದರೆ ತೀವ್ರ ಪ್ರತಿಭಟನೆ ನಡೆಸಲಾಗುವುದು. ಕೇಂದ್ರ ತೆರಿಗೆ ಕಡಿತ ಸಮಾಧಾನಕರ ನಿರ್ಧಾರ. ಇಂಧನ ಬೆಲೆ ಇಳಿಕೆಗೆ ಕೇಂದ್ರ ಸರ್ಕಾರ ಕೃತಜ್ಞತೆಗಳು ಎಂದವರು ತಿಳಿಸಿರುವರು.
ಜನರ ಪ್ರತಿಭಟನೆಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ತೆರಿಗೆ ಇಳಿಕೆ ಮಾಡಿದೆ. ರಾಜ್ಯವೂ ತುರ್ತಾಗಿ ತೆರಿಗೆ ಕಡಿಮೆ ಮಾಡಿ ಜನರಿಗೆ ಪರಿಹಾರ ನೀಡಬೇಕು. ರಾಜ್ಯ ಸರ್ಕಾರ ತನ್ನ ದುರಹಂಕಾರದಿಂದ ಹೊರಬಂದು ಇಂಧನ ಬೆಲೆ ಇಳಿಕೆಗೆ ಮುಂದಾಗಬೇಕು. ಕ್ರಮ ಕೈಗೊಳ್ಳದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದವರು ಎಚ್ಚರಿಕೆ ನೀಡಿರುವರು.