ಮುಂಬೈ: ಇತ್ತೀಚಿಗೆ 1947ರಲ್ಲಿ ಭಾರತಕ್ಕೆ ಬ್ರಿಟಿಷರಿಂದ ಸಿಕ್ಕಿದ್ದು ಸ್ವಾತಂತ್ರವಲ್ಲ ಭಿಕ್ಷೆ ಎಂದು ಹೇಳಿ ವಿವಾದಕ್ಕೆ ಗುರಿಯಾಗಿದ್ದ ಬಾಲಿವುಡ್ ನಟಿ ಕಂಗನಾ ರಣಾವತ್ , ಇದೀಗ ಮಹಾತ್ಮ ಗಾಂಧಿ ಅವರ ಅಹಿಂಸಾ ತತ್ವವನ್ನು ಅಣಕಿಸಿದ್ದಾರೆ.
ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್ ಅವರಿಗೆ ಗಾಂಧೀಜಿ ಅವರಿಂದ ಬೆಂಬಲವೇ ಸಿಗಲಿಲ್ಲ. ಒಂದು ಕೆನ್ನೆಗೆ ಹೊಡೆದರೆ ಇನ್ನೊಂದು ಕೆನ್ನೆ ತೋರಿಸು ಎಂಬ ಗಾಂಧೀಜಿ ಅವರ ತತ್ವವನ್ನು ಅನುಸರಿಸಿದರೆ ನಿಮಗೆ ಸ್ವಾತಂತ್ರ್ಯ ಸಿಗುವುದಿಲ್ಲ , ಭಿಕ್ಷೆ ಮಾತ್ರ ಸಿಗುತ್ತದೆ ಎಂದು ಕಂಗನಾ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಸರಣಿ ಫೋಸ್ಟ್ ಮಾಡಿದ್ದಾರೆ.
ನೇತಾಜಿಯನ್ನು ಹಸ್ತಾಂತರಿಸಲು ಗಾಂಧಿ ಮತ್ತು ಇತರರ ಸಮ್ಮಿತಿ ಎಂಬ ಶೀರ್ಷಿಕೆಯ ಹಳೆಯ ಪತ್ರಿಕೆಯೊಂದರ ವರದಿಯ ತುಣುಕನ್ನು ಇನ್ಸ್ಟಾಗ್ರಾಮ್ ನಲ್ಲಿ ಅವರು ಹಂಚಿಕೊಂಡಿದ್ದಾರೆ.
ಜವಹರ್ ಲಾಲ್ ನೆಹರು, ಮೊಹಮ್ಮದ್ ಆಲಿ ಜಿನ್ನಾ ಅವರೊಂದಿಗೆ ಗಾಂಧೀಜಿ ಅವರು ಬ್ರಿಟಿಷ್ ನ್ಯಾಯಾಧೀಶರೊದಿಗೆ ಒಪ್ಪಂದಕ್ಕೆ ಬಂದಿದ್ದಾರೆ. ಬೋಸ್ ಒಂದು ವೇಳೆ ಭಾರತ ಪ್ರವೇಶಿಸಿದರೆ, ಅವರನ್ನು ಹಸ್ತಾಂತರಿಸಲು ಅವರು ಒಪ್ಪಿದ್ದಾರೆ ಎಂದು ಆ ವರದಿಯಲ್ಲಿದೆ. ಭಗತ್ ಸಿಂಗ್ ಅವರನ್ನು ಗಲ್ಲಿಗೇರಿಸಬೇಕೆಂದು ಬಯಸಿದ್ದನ್ನು ಸೂಚಿಸುವ ಪುರಾವೆಗಳಿವೆ ಎಂದು ಅವರು ಹೇಳಿದ್ದಾರೆ.