ಜಮ್ಮು: ಸನಾತನ ಧರ್ಮವು 'ಒಳಗೊಳ್ಳುವಿಕೆ'ಯನ್ನು ಬೋಧಿಸುತ್ತದೆ ಆದರೆ, ಇದಕ್ಕೆ ಬಿಜೆಪಿಯು ಸಂಪೂರ್ಣ ವಿರುದ್ಧವಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ (ಪಿಡಿಪಿ) ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಟೀಕಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿರುವ ಮುಫ್ತಿ, ಬಿಜೆಪಿ ಮತ್ತು ಆರ್‌ಎಸ್‌ಎಸ್ ಪ್ರಚಾರ ಮಾಡುತ್ತಿರುವುದು ಸನಾತನ ಧರ್ಮವಲ್ಲ ಎಂದು ಹೇಳಿದ್ದಾರೆ.
'ಸನಾತನ ಧರ್ಮವು ಕೋಮುವಾದವನ್ನು ಬೋಧಿಸುವುದಿಲ್ಲ. ಜನರು ಕೋಮುವಾದದ ಹೆಸರಿನಲ್ಲಿ ಕಚ್ಚಾಡುವುದನ್ನು ಬಿಜೆಪಿ, ಆರ್‌ಎಸ್‌ಎಸ್ ಮತ್ತು ಜನ ಸಂಘ ಬಯಸುತ್ತವೆ. ಅವರು ಹಿಂದೂ ಧರ್ಮ ಮತ್ತು ಹಿಂದುತ್ವವನ್ನು ಹೈಜಾಕ್ ಮಾಡಿದ್ದಾರೆ. ಹಿಂದೂ ಧರ್ಮ ಮತ್ತು ಹಿಂದುತ್ವವನ್ನು ಬಿಜೆಪಿ ಮತ್ತು ಆರ್‌ಎಸ್‌ಎಸ್ ಎಂದುಕೊಂಡಿದ್ದಾರೆ. ಆದರೆ, ಅದು ಹಾಗಲ್ಲ' ಎಂದು ಒತ್ತಿ ಹೇಳಿದ್ದಾರೆ.
ಬಿಜೆಪಿ ಮತ್ತು ಆರ್‌ಎಸ್‌ಎಸ್, ಧರ್ಮದ ಹೆಸರಿನಲ್ಲಿ ಹಿಂಸಾಚಾರ ಮತ್ತು ಗಲಭೆಗಳನ್ನು ಸೃಷ್ಟಿಸಿದರೆ, ಧರ್ಮದ ಹೆಸರಿನಲ್ಲಿ ಮತ್ತೊಬ್ಬರನ್ನು ಕೊಲ್ಲುವವರಿಗಿಂತ ಹೇಗೆ ವಿಭಿನ್ನವೆನಿಸಿಕೊಳ್ಳುತ್ತವೆ ಎಂದೂ ಪ್ರಶ್ನಿಸಿದ್ದಾರೆ.
ಮುಂದುವರಿದು, 'ಕೋಮುವಾದಿ ಪಕ್ಷಗಳನ್ನು, ಹಿಂದೂ ಮತ್ತು ಮುಸ್ಲಿಮರನ್ನು ಧರ್ಮದ ಹೆಸರಿನಲ್ಲಿ ಹೋರಾಡುವಂತೆ ಮಾಡುವವರನ್ನು ಐಎಸ್ (ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ) ಅಥವಾ ಬೇರೆ ಯಾವುದೇ ಗುಂಪಿನೊಂದಿಗೆ ಹೋಲಿಸಬಹುದು. ಏಕೆಂದರೆ ಅವರೆಲ್ಲ ಧರ್ಮದ ಹೆಸರಿನಲ್ಲಿ ಜನರನ್ನು ಕೊಲ್ಲುತ್ತಾರೆ' ಎಂದು ಕಿಡಿಕಾರಿದ್ದಾರೆ.