ತಿರುವನಂತಪುರಂ: ರಾಜ್ಯದಲ್ಲಿ ಇನ್ನೆರಡು ದಿನ ಭಾರಿ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆÉ. ನಾಳೆ ಮತ್ತು ಬುಧವಾರ ರಾಜ್ಯದ ಏಳು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಎರ್ನಾಕುಳಂ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗಲಿದೆ. ಬುಧವಾರದವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ದಕ್ಷಿಣ ಭಾರತದ ಕರಾವಳಿಯಲ್ಲಿ ಭಾರೀ ಮಳೆಯಾಗಲಿದೆ. ಶ್ರೀಲಂಕಾ ಮತ್ತು ತಮಿಳುನಾಡಿನ ಕರಾವಳಿಯಲ್ಲಿ ಪ್ರಸ್ತುತ ವಾಯುಭಾರ ಕುಸಿತ ಮುಂದಿನ ಎರಡು ದಿನಗಳವರೆಗೆ ಗಮನಾರ್ಹವಾಗಿ ಸಂಚರಿಸುವ ಸಾಧ್ಯತೆಯಿಲ್ಲ. ಇದಾದ ಬಳಿಕ ಅರಬ್ಬಿ ಸಮುದ್ರದತ್ತ ಸಾಗಲಿದೆ ಎಂದು ಅಂದಾಜಿಸಲಾಗಿದೆ.