ಚೆನ್ನೈ: 25 ವರ್ಷದ ಹೆಣ್ಣಾನೆ ಹಾಗೂ ಅದರ ಎರಡು ಮರಿಗಳು ರೈಲು ಹಳಿ ದಾಟುತ್ತಿದ್ದಾಗ ಮಂಗಳೂರು-ಚೆನ್ನೈ ಎಕ್ಸಪ್ರೆಸ್ ರೈಲು ಡಿಕ್ಕಿಯಾಗಿ ಮೃತಪಟ್ಟಿರುವ ಘಟನೆ ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ.
ಚೆನ್ನೈ: 25 ವರ್ಷದ ಹೆಣ್ಣಾನೆ ಹಾಗೂ ಅದರ ಎರಡು ಮರಿಗಳು ರೈಲು ಹಳಿ ದಾಟುತ್ತಿದ್ದಾಗ ಮಂಗಳೂರು-ಚೆನ್ನೈ ಎಕ್ಸಪ್ರೆಸ್ ರೈಲು ಡಿಕ್ಕಿಯಾಗಿ ಮೃತಪಟ್ಟಿರುವ ಘಟನೆ ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ.
ಮಡುಕ್ಕುರೈ ಬಳಿ ರಾತ್ರಿ 9 ರ ಸಮಯದಲ್ಲಿ ಈ ದುರ್ಘಟನೆ ನಡೆದಿದೆ. ಘಟನೆ ಸಂಭವಿಸಿದಾಗ ರೈಲು ಅತಿ ವೇಗವಾಗಿ ಚಲಿಸುತ್ತಿತ್ತು, ಡಿಕ್ಕಿ ರಭಸಕ್ಕೆ ಆನೆಗಳು ಸ್ಥಳದಲ್ಲೇ ಮೃತಪಟ್ಟಿವೆ. ಸ್ಥಳಕ್ಕೆ ಕಾರ್ಯಾಚರಣೆ ತಂಡ ತೆರಳಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮಂಗಳೂರು-ಚೆನ್ನೈ ಎಕ್ಸಪ್ರೆಸ್ ರೈಲು ಕೇರಳದ ಕೋಯಿಕ್ಕೋಡ್ ಹಾಗೂ ಪಾಲಕ್ಕಾಡ್ ಮಾರ್ಗವಾಗಿ ಚೆನ್ನೈಗೆ ತೆರಳುತ್ತದೆ.
ಕೊಯಮತ್ತೂರು ಬಳಿ ಇತ್ತೀಚೆಗೆ ಆನೆಗಳ ಅಸಹಜ ಸಾವು ಹೆಚ್ಚುತ್ತಿದ್ದು ಇದು ಪರಿಸರ ಹಾಗೂ ಪ್ರಾಣಿ ಪ್ರಿಯರಲ್ಲಿ ಆತಂಕ ಮೂಡಿಸಿದೆ.