ಕೊಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿ ಸೇರಿ, ಟಿಎಂಸಿ ಅಭ್ಯರ್ಥಿ ಪಾರ್ಥ ಚಟರ್ಜಿ ವಿರುದ್ಧ ಸೋತಿದ್ದ ಬಂಗಾಳದ ನಟಿ ಶ್ರಬಂತಿ ಚಟರ್ಜಿ ಗುರುವಾರ ಪಕ್ಷವನ್ನು ತೊರೆದಿದ್ದಾರೆ. ಪಶ್ಚಿಮ ಬಂಗಾಳವನ್ನು ಪ್ರಗತಿಯತ್ತ ಕೊಂಡೊಯ್ಯುವಲ್ಲಿ ಪಕ್ಷದಲ್ಲಿ ಪ್ರಾಮಾಣಿಕತೆ ಮತ್ತು ಉಪಕ್ರಮದ ಕೊರತೆಯ ಕಾರಣದಿಂದ ಪಕ್ಷ ತೊರೆಯುತ್ತಿರುವುದಾಗಿ ಅವರು ಹೇಳಿದ್ದಾರೆ.
ಭಾರೀ ಪ್ರಚಾರದ ಹೊರತಾಗಿಯೂ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಸರ್ಕಾರವನ್ನು ಅಧಿಕಾರದಿಂದ ದೂರವಿಡುವಲ್ಲಿ ವಿಫಲವಾದ ನಂತರ 34 ವರ್ಷದ ನಟಿ ಶ್ರಬಂತಿ ಬಿಜೆಪಿ ಪಕ್ಷದಿಂದ ಅಂತರವನ್ನು ಕಾಯ್ದುಕೊಂಡಿದ್ದರು.
ಕಳೆದ ಚುನಾವಣೆಯಲ್ಲಿ ನಾನು ಸ್ಪರ್ಧಿಸಿದ್ದ ಬಿಜೆಪಿಯೊಂದಿಗಿನ ಎಲ್ಲಾ ಸಂಬಂಧಗಳನ್ನು ಕಡಿದುಕೊಂಡಿದ್ದೇನೆ. ಬಂಗಾಳವನ್ನು ಪ್ರಗತಿಯತ್ತ ಕೊಂಡೊಯ್ಯುವಲ್ಲಿ ಅವರಲ್ಲಿನ ಪ್ರಾಮಾಣಿಕತೆ ಮತ್ತು ಉಪ ಕ್ರಮದ ಕೊರತೆಯೇ ತಮ್ಮ ರಾಜೀನಾಮೆಗೆ ಕಾರಣ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಆದಾಗ್ಯೂ, ಪಶ್ಚಿಮ ಬಂಗಾಳ ಬಿಜೆಪಿ, ಚಟರ್ಜಿ ಅವರ ನಿರ್ಧಾರಕ್ಕೆ ಹೆಚ್ಚಿನ ಮಹತ್ವ ನೀಡಿಲ್ಲ. ಚುನಾವಣೆ ನಂತರ ಅವರು ಪಕ್ಷದಲ್ಲಿ ಇದ್ದಾರೆ ಎಂಬುದೇ ನನಗೆ ಗೊತ್ತಿರಲಿಲ್ಲ. ಇದರಿಂದ ಪಕ್ಷದ ಮೇಲೆ ಯಾವುದೇ ಪರಿಣಾಮ ಆಗಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸುಕಾಂತ ಮಜುಂದ್ದಾರ್ ಹೇಳಿದ್ದಾರೆ.