HEALTH TIPS

ಭಾರತದ ಭೂ ಪ್ರದೇಶದಲ್ಲಿ ಚೀನಾ ಗ್ರಾಮ ನಿರ್ಮಿಸಿಲ್ಲ: ಬಿಪಿನ್ ರಾವತ್

                 ನವದೆಹಲಿ: ಭಾರತದ ಭೂ ಪ್ರದೇಶದಲ್ಲಿ ಚೀನಾವು ಅಕ್ರಮವಾಗಿ ಹಳ್ಳಿಯೊಂದನ್ನು ನಿರ್ಮಿಸಿದೆ ಎಂಬ ವರದಿಗಳನ್ನು ರಕ್ಷಣಾ ಪಡೆಗಳ ಮುಖ್ಯಸ್ಥ (ಸಿಡಿಎಸ್) ಬಿಪಿನ್ ರಾವತ್ ಅಲ್ಲಗಳೆದಿದ್ದಾರೆ. ನೈಜ ನಿಯಂತ್ರಣ ರೇಖೆಯ (ಎಲ್‌ಎಸಿ) ಚೀನಾ ಪ್ರದೇಶದಲ್ಲೇ ಆ ಹಳ್ಳಿ ಇದೆ ಎಂದು ಅವರು ಹೇಳಿದ್ದಾರೆ.

            ಭಾರತವು ಪ್ರತಿಪಾದಿಸುತ್ತಿರುವ ಎಲ್‌ಎಸಿಯನ್ನು ಚೀನಾ ಉಲ್ಲಂಘಿಸಿಲ್ಲ ಎಂದೂ ಅವರು ಹೇಳಿದ್ದಾರೆ.

                ಟಿಬೆಟ್ ಸ್ವಾಯತ್ತ ಪ್ರದೇಶ ಮತ್ತು ಅರುಣಾಚಲ ಪ್ರದೇಶದ ನಡುವಣ ವಿವಾದಿತ ಪ್ರದೇಶದಲ್ಲಿ ಚೀನಾವು 100 ಮನೆಗಳನ್ನು ಒಳಗೊಂಡ ಗ್ರಾಮ ನಿರ್ಮಾಣ ಮಾಡಿದೆ ಎಂದು ಇತ್ತೀಚೆಗೆ ಬಿಡುಗಡೆಗೊಂಡ ಅಮೆರಿಕದ ರಕ್ಷಣಾ ಇಲಾಖೆಯ ವಾರ್ಷಿಕ ವರದಿಯಲ್ಲಿ ಉಲ್ಲೇಖವಾಗಿತ್ತು. ಆದರೆ ಇದನ್ನು ರಾವತ್ ನಿರಾಕರಿಸಿದ್ದಾರೆ.

             'ಟೈಮ್ಸ್ ನೌ ಶೃಂಗಸಭೆಯಲ್ಲಿ' ಮಾತನಾಡಿದ ಅವರು, 'ಈವರೆಗೆ ನಮ್ಮ ಗಮನಕ್ಕೆ ಬಂದಿರುವಂತೆ ಭಾರತದ ಪ್ರದೇಶದಲ್ಲಿ ಚೀನಾ ಗ್ರಾಮ ನಿರ್ಮಾಣ ಮಾಡಿಲ್ಲ. ಆದರೆ ಇತ್ತೀಚಿನ ಸೇನಾ ಮುಖಾಮುಖಿಯ ಬಳಿಕ ಚೀನಾವು ಎಲ್‌ಎಸಿಯುದ್ದಕ್ಕೂ ತನ್ನದೇ ಭೂ ಪ್ರದೇಶದಲ್ಲಿ ನಾಗರಿಕರನ್ನು ನೆಲೆಗೊಳಿಸುತ್ತಿದೆ. ಭವಿಷ್ಯದಲ್ಲಿ ಸೇನೆಗೆ ನೆರವಾಗುವ ಉದ್ದೇಶದಿಂದ ಈ ರೀತಿ ಮಾಡುತ್ತಿದೆ' ಎಂದು ಹೇಳಿದ್ದಾರೆ.

             ಉಭಯ ದೇಶಗಳ ಸೇನಾ ಪಡೆಗಳು ಎಲ್‌ಎಸಿಯ ತಮ್ಮದೇ ಪ್ರದೇಶಗಳಲ್ಲಿ ಬೀಡುಬಿಟ್ಟಿವೆ ಎಂದು ಅವರು ಹೇಳಿದ್ದಾರೆ.

              ಚೀನಾವು ನಮ್ಮ ಪ್ರದೇಶವನ್ನು ಆಕ್ರಮಿಸುವ ಅಥವಾ ಅದರ ಅಸಮರ್ಥನೀಯ ವಾದವನ್ನು ಒಪ್ಪಿಕೊಳ್ಳುವ ಮಾತೇ ಇಲ್ಲ ಎಂದು ವಿದೇಶಾಂಗ ಇಲಾಖೆಯ ವಕ್ತಾರ ಅರಿಂದಮ್ ಬಾಗ್ಚಿ ಗುರುವಾರ ಹೇಳಿದ್ದರು.

             ಅಮೆರಿಕದ ವರದಿಗೆ ಸಂಬಂಧಿಸಿ ಪ್ರತಿಕ್ರಿಯಿಸಿದ್ದ ಅವರು, 'ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಪ್ರದೇಶವೂ ಸೇರಿದಂತೆ ಗಡಿಯಲ್ಲಿ ಹಲವು ವರ್ಷಗಳಿಂದ ಚೀನಾ ನಿರ್ಮಾಣ ಕಾಮಗಾರಿಗಳನ್ನು ನಡೆಸುತ್ತಿದೆ. ಈ ವರ್ಷದ ಆರಂಭದಲ್ಲಿ ಮಾಧ್ಯಮಗಳಲ್ಲಿ ಈ ಬಗ್ಗೆ ಸುದ್ದಿಗಳು ಪ್ರಸಾರವಾಗಿದ್ದವು. ಚೀನಾದ ಅಕ್ರಮ ನಿರ್ಮಾಣವನ್ನು ಒಪ್ಪಿಕೊಳ್ಳುವ ಮಾತೇ ಇಲ್ಲ. ಆ ರೀತಿಯ ಚಟುವಟಿಕಗಳ ಬಗ್ಗೆ ಸರ್ಕಾರವು ರಾಜತಾಂತ್ರಿಕವಾಗಿ ಈ ಹಿಂದೆ ಪ್ರಬಲ ಪ್ರತಿಭಟನೆಯನ್ನು ವ್ಯಕ್ತಪಡಿಸಿದೆ. ಮುಂದೆಯೂ ಅದನ್ನು ಮಾಡಲಿದೆ' ಎಂದು ಹೇಳಿದ್ದರು. ಭಾರತವೂ ಗಡಿಯುದ್ದಕ್ಕೂ ರಸ್ತೆ ಮತ್ತು ಸೇತುವೆಗಳ ನಿರ್ಮಾಣ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದೆ ಎಂದೂ ಅವರು ಹೇಳಿದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries