HEALTH TIPS

ಗ್ರಾಹಕರ ಜೇಬಿಗೆ ಕತ್ತರಿ: ಪೆಟ್ರೋಲ್-ಡೀಸೆಲ್ ಬೆಲೆ ಸತತ ಏರಿಕೆ, ಇಂದಿನ ದರ ಇಷ್ಟಿದೆ

        ನವದೆಹಲಿ: ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಬುಧವಾರ 35 ಪೈಸೆ ಏರಿಕೆಯಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

        ಇಂದಿನ ದರವೆಷ್ಟು?: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ ಮತ್ತು ಲೀಟರ್ ಡೀಸೆಲ್ ದರದಲ್ಲಿ ಕ್ರಮವಾಗಿ 35 ಪೈಸೆ ಹೆಚ್ಚಳವಾಗಿದೆ. ಇದರಂತೆ ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ದರ 110 ರೂಪಾಯಿ 04 ಪೈಸೆಗೆ ಏರಿಕೆಯಾಗಿದ್ದು,  ಡೀಸೆಲ್​ ದರ ಸಹ 100ರ ಗಡಿ ತಲುಪಿ 98 ರೂಪಾಯಿ 42 ಪೈಸೆಯಾಗಿದೆ. ಇಂಧನ ದರ ಗರಿಷ್ಠ ಮಟ್ಟ ತಲುಪಿದೆ.

       ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 115 ರೂಪಾಯಿ 85 ಪೈಸೆಯಾಗಿದ್ದು, ಡೀಸೆಲ್ ದರ 106 ರೂಪಾಯಿ 62 ಪೈಸೆಯಾಗಿದೆ. ಅದೇ ರೀತಿ ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 110 ರೂಪಾಯಿ 49 ಪೈಸೆಯಾಗಿದ್ದು, ಡೀಸೆಲ್ ದರ 101 ರೂಪಾಯಿ 56 ಪೈಸೆಯಾಗಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ಬೆಲೆ 106 ರೂಪಾಯಿ 66 ಪೈಸೆಯಾಗಿದ್ದು, ಡೀಸೆಲ್ ಬೆಲೆ 102 ರೂಪಾಯಿ 59 ಪೈಸೆಯಾಗಿದೆ.

        ತೈಲ ಕಂಪನಿಗಳು ಪ್ರತಿನಿತ್ಯ ಇಂಧನ ಬೆಲೆ ಏರಿಕೆ ಮಾಡುತ್ತಿರುವುದು ಜನಸಾಮಾನ್ಯರನ್ನು ಸಂಕಷ್ಟಕ್ಕೆ ಸಿಲುಕಿಸಿದೆ.  ಇಂಧನ ಬೆಲೆ ಏರಿಕೆಯಿಂದ ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯೂ ಏರಿಕೆಯಾಗುತ್ತಿದೆ.  ಬೆಲೆ ಇಳಿಸಲು ಕೇಂದ್ರ ಹಾಗೂ ರಾಜ್ಯ ಸರಕಾರ ವಿಧಿಸುತ್ತಿರುವ ತೆರಿಗೆಯನ್ನು ಕಡಿಮೆ ಮಾಡಬೇಕೆಂಬ ಆಗ್ರಹ ಕೇಳಿ ಬಂದಿದೆ.

       ಬೆಲೆ ಇಳಿಕೆಗಾಗಿ ಜಿಎಸ್‌ಟಿಗೆ ಸೇರಿಸಬೇಕೆಂಬ ಬೇಡಿಕೆಯೂ ಹೆಚ್ಚುತ್ತಿದೆ.  ಆದರೆ ಬಹುಪಾಲು ರಾಜ್ಯಗಳು ಇದನ್ನು ವಿರೋಧಿಸಿದ ನಂತರ ಪೆಟ್ರೋಲ್ ಮತ್ತು ಡೀಸೆಲ್ ನ್ನು ಜಿಎಸ್‌ಟಿಗೆ ಸೇರಿಸದಿರಲು ಕೌನ್ಸಿಲ್ ನಿರ್ಧರಿಸಿತು.  ಇಂಧನ ಬೆಲೆಯನ್ನು ಜಿಎಸ್‌ಟಿ ವ್ಯಾಪ್ತಿಗೆ ಸೇರಿಸಲು ರಾಜ್ಯಗಳು ಒಪ್ಪಿಗೆ ನೀಡದಿರುವುದು ದೇಶದ ಇಂಧನ ಬೆಲೆ ಏರಿಕೆಗೆ ಕಾರಣ ಎಂದು ಕೇಂದ್ರ ಸರ್ಕಾರ ಹೇಳಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries