ಉಪ್ಪಳ: ಪ್ಲಸ್ ಒನ್ ವಿದ್ಯಾರ್ಥಿ ವಿರುದ್ಧ ರ್ಯಾಗಿಂಗ್ ನಡೆಸಿದ ಘಟನೆ ನಡೆದಿದೆ. ಹಿರಿಯ ವಿದ್ಯಾರ್ಥಿಗಳು ರ ್ಯಾಗಿಂಗ್ ಹೆಸರಿನಲ್ಲಿ ವಿದ್ಯಾರ್ಥಿಯ ಕೂದಲು ಕತ್ತರಿಸಲಾಯಿತು. ಉಪ್ಪಳ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಘಟನೆ ನಡೆದಿದೆ.
ಪ್ಲಸ್ ವನ್ ಕಾಮರ್ಸ್ ವಿದ್ಯಾರ್ಥಿಯಾದ ಅರ್ಮಾನ್ ಹಿರಿಯ ವಿದ್ಯಾರ್ಥಿಗಳಿಂದ ಕೇಶ ಮುಂಡನಗೊಳಗಾಗಿದ್ದಾನೆ. ಘಟನೆ ಬುಧವಾರ ನಡೆದಿದೆ. ಘಟನೆಯ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾದ ಬಳಿಕ ಘಟನೆ ಬೆಳಕಿಗೆ ಬಂದಿದೆ.
ಘಟನೆಯಲ್ಲಿ ವಿದ್ಯಾರ್ಥಿ ಮತ್ತು ಆತನ ಪೋಷಕರು ಇನ್ನೂ ಲಿಖಿತ ದೂರು ದಾಖಲಿಸಿಲ್ಲ ಎಂದು ತಿಳಿದು ಬಂದಿದೆ. ಘಟನೆಯ ಬಗ್ಗೆ ಮಂಜೇಶ್ವರ ಪೊಲೀಸರಿಗೆ ಯಾವುದೇ ದೂರು ಬಂದಿಲ್ಲ ಎಂದು ಹೇಳಲಾಗಿದೆ.