ಸಮರಸ ಚಿತ್ರ ಸುದ್ದಿ: ಕಾಸರಗೋಡು: ಮಾಜಿ ಪ್ರಧಾನಿ ಇಂದಿರಾಗಾಂಧಿ ಸಂಸ್ಮರಣಾ ದಿನಾಚರಣೆ ಅಂಗವಾಗಿ ಕಾಸರಗೋಡು ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ನಡೆದ ಸಂಸ್ಮರಣಾ ಸಮಾರಂಭವನ್ನು ಮಾಜಿ ಕೆಪಿಸಿಸಿ ಅಧ್ಯಕ್ಷ ಮುಲ್ಲಪಳ್ಳಿ ರಾಮಚಂದ್ರನ್ ಉದ್ಘಾಟಿಸಿದರು. ಡಿಸಿಸಿ ಅಧ್ಯಕ್ಷ ಪಿ.ಕೆ ಫೈಸಲ್, ಸಂಸದ ರಾಜ್‍ಮೋಹನ್ ಉಣ್ಣಿತ್ತಾನ್, ಸಿ.ಕೆ ಶ್ರೀಧರನ್ ಮುಂತಾದವರು ಉಪಸ್ಥಿತರಿದ್ದರು.