HEALTH TIPS

ಕೃಷಿ ಕಾನೂನುಗಳ ಹಿಂಪಡೆಯುವ ಮಸೂದೆ ಮಂಡನೆ: ಬಿಜೆಪಿ ಸಂಸದರಿಗೆ ವಿಪ್ ಜಾರಿ

                 ನವದೆಹಲಿ: ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವ ಮಸೂದೆಯನ್ನು ಇದೇ ನವೆಂಬರ್ 29ರಂದು ಸಂಸತ್‌ನಲ್ಲಿ ಮಂಡಿಸಲಾಗುತ್ತಿದ್ದು, ಆಡಳಿತಾರೂಢ ಬಿಜೆಪಿಯು ತನ್ನ ಸಂಸದರಿಗೆ ವಿಪ್ ಜಾರಿ ಮಾಡಿದೆ.

                ಬಿಜೆಪಿ ತನ್ನ ರಾಜ್ಯಸಭಾ ಸಂಸದರಿಗೆ ಈ ಹಿಂದೆ ವಿಪ್ ಜಾರಿ ಮಾಡಿತ್ತು, ಕಳೆದ ರಾತ್ರಿ ಕಾಂಗ್ರೆಸ್ ತನ್ನಾ ಎಲ್ಲಾ ಸಂಸದರಿಗೆ ಮೂರು ಸಾಲಿನ ವಿಪ್ ಜಾರಿ ಮಾಡಿದೆ. ಸಂಸತ್ತಿನ ಚಳಿಗಾಲದ ಅಧಿವೇಶನವು ಸೋಮವಾರದಿಂದ ಆರಂಭವಾಗುತ್ತಿದ್ದು, ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆ ಅಂಗೀಕರಿಸಲು ಪಟ್ಟಿ ಮಾಡಲಾಗಿದೆ.

          ವಿವಾದಾತ್ಮಕ ಕ್ರಿಪ್ಟೋಕರೆನ್ಸಿ ಬಿಲ್ ಹಾಗೂ ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಸರ್ಕಾರದ ಪಾಲನ್ನು ಶೇ.51 ರಿಂದ ಕೇವಲ ಶೇ.26ಕ್ಕೆ ತಗ್ಗಿಸಲು ಮಸೂದೆಯನ್ನು ಮಂಡಿಸಲಾಗುತ್ತಿದೆ.

             ಕಳೆದ ವರ್ಷ ಮುಂಗಾರು ಅಧಿವೇಶನದಲ್ಲಿ ಅಂಗೀಕರಿಸಲ್ಪಟ್ಟ ಹಾಗೂ ತೀವ್ರ ಪ್ರತಿಭಟನೆಗೆ ಒಳಗಾದ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆಯನ್ನು ಈ ವಾರ ಕೇಂದ್ರ ಸಚಿವ ಸಂಪುಟವು ಅನುಮೋದಿಸಿದೆ.

                 ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಇನ್ನೆರಡು ದಿನಗಳು ಮಾತ್ರ ಬಾಕಿ ಇದೆ. ಮೂರು ಕೃಷಿ ಕಾಯ್ದೆಗಳ ರದ್ದತಿ ಮಸೂದೆಯನ್ನೂ ಅಧಿವೇಶನದ ಇತರ 26 ಕಾರ್ಯಸೂಚಿಯೊಂದಿಗೆ ಕೇಂದ್ರ ಸರ್ಕಾರ ಸೇರಿಸಿದೆ. ಇನ್ನುಳಿದಂತೆ ಕ್ರಿಪ್ಟೋಕರೆನ್ಸಿ ಮಸೂದೆ, ಸಾರ್ವಜನಿಕ ವಲಯದ ಬ್ಯಾಂಕ್​ಗಳಲ್ಲಿ ಸರ್ಕಾರದ ಪಾಲನ್ನು ಶೇ.51ರಿಂದ ಶೇ.26ಕ್ಕೆ ಇಳಿಸುವ ಬಿಲ್​ಗಳೂ ಸೇರಿದ್ದು, ಇವು ಬಹುಮುಖ್ಯವಾಗಿವೆ. ಈ ಕೃಷಿ ಕಾಯ್ದೆಗಳನ್ನು ಕಳೆದ ವರ್ಷದ ಮುಂಗಾರು ಅಧಿವೇಶನದಲ್ಲಿ ಅಂಗೀಕಾರ ಮಾಡಲಾಗಿತ್ತು.

             ಆದರೆ ಕೃಷಿ ಮಸೂದೆಗಳು ಪಾಸ್ ಆಗಿ ಕಾಯ್ದೆಯಾಗಿ ರೂಪುಗೊಂಡಾಗಿನಿಂದಲೂ ರೈತರು ಸಿಕ್ಕಾಪಟೆ ಪ್ರತಿಭಟನೆ ಮಾಡುತ್ತಲೇ ಇದ್ದರು. ಕಳೆದೊಂದು ವರ್ಷದಿಂದಲೂ ದೆಹಲಿಯ ಗಡಿಭಾಗಗಳಲ್ಲಿ ರೈತರ ಹೋರಾಟ ಮುಂದುವರಿದಿತ್ತು.

             ಕೇಂದ್ರ ಸರ್ಕಾರ ಮತ್ತು ಪ್ರತಿಭಟನಾ ನಿರತ ರೈತರ ನಡುವಿನ ಹಲವು ಸುತ್ತಿನ ಮಾತುಕತೆಗಳು ವಿಫಲವಾದ ಬೆನ್ನಲ್ಲೇ ನವೆಂಬರ್ 19ರ ಗುರುನಾನಕ್​ ಜಯಂತಿಯಂದು ಈ ಕೃಷಿ ಕಾಯ್ದೆಗಳನ್ನು ವಾಪಸ್​ ಪಡೆಯುವುದಾಗಿ ಪ್ರಧಾನಿ ಮೋದಿ ಘೋಷಿಸಿದ್ದರು. ಆದರೆ ಸಂಸತ್ತಿನಲ್ಲಿ ರದ್ದುಗೊಂಡ ವಿನಃ ಹೋರಾಟ ಕೈಬಿಡುವುದಿಲ್ಲ ಎಂದು ರೈತರು ಪಟ್ಟು ಹಿಡಿದಿದ್ದಾರೆ. ಇದೀಗ ಅದನ್ನು ರದ್ದುಪಡಿಸಲು ಮತ್ತೊಂದು ಬಿಲ್​ ಅಂಗೀಕಾರ ಮಾಡಬೇಕಾಗಿದೆ.

           ಮೋದಿ ಭಾಷಣದ ಹೈಲೈಟ್ಸ್

   -ರೈತರು ಸಂಕಷ್ಟ ಎದುರಿಸುತ್ತಿರುವುದನ್ನು ನನ್ನ 5 ವರ್ಷದ ಅಧಿಕಾರಾವಧಿಯಲ್ಲಿ ನಾನು ಕಂಡಿದ್ದೇನೆ, ಈ ದೇಶದ ಪ್ರಧಾನಿಯನ್ನಾಗಿ ನನ್ನನ್ನು ಆಯ್ಕೆ ಮಾಡಿದ ಬಳಿಕ ಕೃಷಿ ವಿಕಾಸ ಅಥವಾ ರೈತರ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿದ್ದೇನೆ.

    -ಸಣ್ಣ ಕೃಷಿಕರನ್ನು ಮುನ್ನಲೆಗೆ ತರುವ ನಿಟ್ಟಿನಲ್ಲಿ ಉತ್ತಮ ಬೀಜ, ವಿಮೆ, ಮಾರುಕಟ್ಟೆ ಒದಗಿಸಿದ್ದೇವೆ. ಜತೆಗೆ ಉತ್ತಮ ಗುಣಮಟ್ಟದ ಬೀಜಗಳನ್ನು ವಿತರಿಸಿದ್ದೇವೆ. ಜತೆಗೆ ಕಹಿಬೇವು ಮಿಶ್ರಿತ ಯೂರಿಯಾ, ಸಾಯಿಲ್ ಹೆಲ್ತ್ ಕಾರ್ಡ್, ಮೈಕ್ರೋ ಇರಿಗೇಷನ್‌ಗೆ ಹೆಚ್ಚು ಒತ್ತು ನೀಡಿದ್ದೇವೆ.

    -ಫಸಲ್ ಭೀಮಾ ಯೋಜನೆಯು ಹಲವು ರೈತರಿಗೆ ಸಹಾಯ ಮಾಡಿದೆ, ಪರಿಹಾರಾರ್ಥವಾಗಿ ರೈತರಿಗೆಂದು ಒಂದು ಲಕ್ಷ ಕೋಟಿಯನ್ನು ನೀಡಲಾಗಿದೆ.

    -ಎಂಎಸ್‌ಪಿ ಹೆಚ್ಚಳ ಸಾವಿರ ಮಂಡಿಯನ್ನು ಇ-ಮಂಡಿಗಳೊಂದಿಗೆ ಸಂಪರ್ಕ ಕಲ್ಪಿಸುವ ಕೆಲಸ ಮಾಡಿದ್ದೇವೆ ಹಾಗೆಯೇ ತಮ್ಮ ಬೆಳೆಯನ್ನು ದೇಶಾದ್ಯಂತ ಎಲ್ಲಿ ಬೇಕಾದರೂ ಮಾರಾಟ ಮಾಡಿಕೊಳ್ಳುವ ವ್ಯವಸ್ಥೆಯನ್ನು ಮಾಡಿಕೊಟ್ಟಿದ್ದೇವೆ.

-ಕೃಷಿ ಕಾನೂನನ್ನು ಒಳ್ಳೆಯ ದೃಷ್ಟಿಯಿಂದಲೇ ಜಾರಿಗೆ ತಂದಿದ್ದೆವು, ಬೆಳೆ ಸಾಲವನ್ನು ಕೂಡ ದ್ವಿಗುಣಗೊಳಿಸಿದ್ದೆವು, ವಾರ್ಷಿಕ ಬಜೆಟ್ ಪ್ರಮಾಣವನ್ನು ಕೂಡ ಏರಿಕೆ ಮಾಡಿದ್ದೆವು.

     -ನಾವು ಸಣ್ಣ ಕೃಷಿಕರಿಗೆ ಹೆಚ್ಚು ಒತ್ತು ನೀಡಿದ್ದೇವೆ ಇವುಗಳನ್ನು ರೈತರಿಗೆ ಅರ್ಥಮಾಡಿಸಲು ನಮ್ಮಿಂದ ಸಾಧ್ಯವಾಗಿಲ್ಲ, ಈ ವಿಷಯ ಸುಪ್ರೀಂಕೋರ್ಟ್‌ವರೆಗೂ ಹೋಗಿದೆ. ಇದೆಲ್ಲಾ ಕಾರಣಗಳಿಂದ ಈ ಮೂರು ಕೃಷಿ ಕಾನೂನುನಗಳನ್ನು ಸರ್ಕಾರ ಹಿಂಪಡೆಯಲು ನಿರ್ಧರಿಸಿದೆ.

     -ರೈತರ ಸಮಸ್ಯೆ ಬಗೆಹರಿಸುವುದು ಸರ್ಕಾರದ ಪ್ರಮುಖಾದ್ಯತೆಯಾಗಿದೆ. ದೇಶದಲ್ಲಿ 100ರಲ್ಲಿ ಶೇ.80ರಷ್ಟು ಸಣ್ಣ ಹಿಡುವಳಿ ರೈತರಾಗಿದ್ದು, 10 ಕೋಟಿಗಿಂತ ಹೆಚ್ಚು ಸಣ್ಣ ರೈತರಿದ್ದಾರೆ.

    -ಕೃಷಿ ತಿದ್ದುಪಡಿ ಕಾಯ್ದೆ ಹಿಂಪಡೆಯಲು ರೈತರ ನಿರಂತರ ಹೋರಾಟ ಹಿನ್ನೆಲೆ ಕಾಯ್ದೆಗಳು ವಾಪಸ್ ತೆಗೆದುಕೊಳ್ಳಲಾಗುವುದು. 3 ಕೃಷಿ ತಿದ್ದುಪಡಿ ಕಾಯ್ದೆ ಹಿಂಪಡೆಯುತ್ತಿದ್ದೇವೆ. ಅದಕ್ಕಾಗಿ ಸಮಿತಿ ರಚಿಸುತ್ತೇವೆ. ಇದರಲ್ಲಿ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ, ರೈತರು ಮತ್ತು ಕೃಷಿ ತಜ್ಞರು ಇರಲಿದ್ದಾರೆ ಎಂದು ಪ್ರಧಾನಿ ಮೋದಿ ಘೋಷಣೆ ಮಾಡಿದ್ದಾರೆ.

     -ರೈತರ ಆರ್ಥಿಕ, ಸಾಮಾಜಿಕ ಸ್ಥಿತಿ ಸುಧಾರಿಸಲು ಪ್ರಯತ್ನ ಮಾಡಲಾಗುವುದು. ರೈತರ ಸ್ಥಿತಿ ಸುಧಾರಿಸಲು 3 ಕಾಯ್ದೆ ಜಾರಿಗೆ ತಂದಿದ್ದೆವು. ಸಣ್ಣ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಾಯ್ದೆ ಜಾರಿ ಮಾಡಲಾಗಿತ್ತು. ಸಣ್ಣ ರೈತರ ಒಳಿತಿಗಾಗಿಯೇ ಕಾಯ್ದೆ ಜಾರಿಗೆ ತಂದಿದ್ದೆವು.

    ಈ 3 ಕಾನೂನುಗಳು ಸಂಪೂರ್ಣವಾಗಿ ರೈತರ ಪರವಾಗಿವೆ. ರೈತರ ಹಿತ ದೃಷ್ಟಿಯಲ್ಲಿಟ್ಟುಕೊಂಡೇ ಕಾಯ್ದೆ ಜಾರಿಯಾಗಿತ್ತು. ಯೋಜನೆ ಬಗ್ಗೆ ರೈತರಿಗೆ ತಿಳಿಸುವಲ್ಲಿ ಸಾಕಷ್ಟು ಯತ್ನಿಸಿದ್ದೇವೆ. ಆದ್ರೆ ಕೆಲವು ರೈತರು ಕಾಯ್ದೆಯನ್ನು ವಿರೋಧಿಸುತ್ತಿದ್ದಾರೆ. ಅವರು ಸಲಹೆ ಒಪ್ಪಿಕೊಂಡರೂ ಕಾಯ್ದೆ ವಿರೋಧಿಸುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಇದೇ ವೇಳೆ ವಿಷಾದಿಸಿದರು.


               

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries