ಸೋನೆಪತ್: ನನ್ನ ಹಾಗೂ ನನ್ನ ಕುಟುಂಬದ ಮೇಲೆ ಯಾವುದೇ ಗುಂಡಿನ ದಾಳಿ ನಡೆದಿಲ್ಲ. ನಾನು ಮತ್ತು ನನ್ನ ಕುಟುಂಬ ಸುರಕ್ಷಿತವಾಗಿದೆ ಎಂದು ರಾಷ್ಟ್ರೀಯ ಕುಸ್ತಿಪಟು ನಿಶಾ ದಹಿಯಾ ಮತ್ತು ಅವರು ಬುಧವಾರ ಸ್ಪಷ್ಟನೆ ನೀಡಿದ್ದಾರೆ.
ಇದಕ್ಕೂ ಮುನ್ನ ಹರಿಯಾಣದ ಸೋನೆಪತ್ ನ ಹಲಾಲ್‌ಪುರದಲ್ಲಿರುವ ಸುಶೀಲ್ ಕುಮಾರ್ ಕುಸ್ತಿ ಅಕಾಡೆಮಿಯಲ್ಲಿ ಅಪರಿಚಿತ ದುಷ್ಕರ್ಮಿಗಳು ನಿಶಾ ಹಾಗೂ ಅವರ ಸಹೋದರನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು.
ಮಾಧ್ಯಮ ವರದಿಗಳನ್ನು ಗಮನಿಸಿದ ಬಳಿಕ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ನಿಶಾ ದಹಿಯಾ ಅವರು, ಮಾಧ್ಯಮಗಳಲ್ಲಿ ಬರುತ್ತಿರುವ ವರದಿ ಸುಳ್ಳು. ನನ್ನ ಮೇಲೆ ಯಾವುದೇ ಗುಂಡಿನ ದಾಳಿ ನಡೆದಿಲ್ಲ. ನಾನು ಮತ್ತು ನನ್ನ ಕುಟುಂಬ ಸುರಕ್ಷಿತವಾಗಿದೆ ಎಂದು ಹೇಳಿದ್ದಾರೆ.
ಸುಶೀಲ್ ಕುಮಾರ್ ಕುಸ್ತಿ ಅಕಾಡೆಮಿಯಲ್ಲಿ ನಿಜಕ್ಕೂ ಗುಂಡಿನ ದಾಳಿ ನಡೆದಿಯೇ? ಅಥವಾ ಇದು ಸುಳ್ಳು ಸದ್ದಿಯೇ ಎಂಬುದರ ಬಗ್ಗೆ ಯಾವುದೇ ಮಾಹಿತಿ ಇಲ್ಲ.