ಕಾಸರಗೋಡು: ಜಿಲ್ಲಾ ಪಂಚಾಯತ್ ನ ಹಾಲು ಇನ್ಸೆಂಟೀವ್ ಯೋಜನೆಯ ಜಿಲ್ಲಾ ಮಟ್ಟದ ಉದ್ಘಾಟನೆ ನ.20ರಂದು ಬೆಳಗ್ಗೆ 10.30ಕ್ಕೆ ಮಡಿಕೈ ಸರ್ವೀಸ್ ಸೇವಾ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ಜರುಗಲಿದೆ. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಬೇಬಿ ಬಾಲಕೃಷ್ಣನ್ ಉದ್ಘಾಟಿಸುವರು. ಮಡಿಕೈ ಗ್ರಾಮ ಪಂಚಾಯತ್ ಅಧ್ಯಕ್ಷೆ ಎಸ್.ಪ್ರೀತಾ ಅಧ್ಯಕ್ಷತೆ ವಹಿಸುವರು.