'ಪರೀಕ್ಷಾ ಸಂಖ್ಯೆ ಇಳಿಕೆಯಾಗುತ್ತಿರುವುದರಿಂದ ಸೋಂಕಿನ ಹರಡುವಿಕೆಯನ್ನು ನಿರ್ಧರಿಸುವುದು ಕಷ್ಟವಾಗುತ್ತದೆ. ಅಭಿವೃದ್ಧಿ ಹೊಂದಿರುವ ಕೆಲವು ದೇಶಗಳು ಕೋವಿಡ್‌ನ ನಾಲ್ಕನೇ ಮತ್ತು ಐದನೇ ಅಲೆಯನ್ನು ಎದುರಿಸುತ್ತಿವೆ. ಸಾಂಕ್ರಾಮಿಕ ರೋಗದ ಈ ಅನಿರೀಕ್ಷಿತ ಮತ್ತು ಸಾಂಕ್ರಾಮಿಕ ಸ್ವರೂಪವನ್ನು ಗಮನಿಸಿದರೆ ನಿರಂತರ ಜಾಗರೂಕತೆಯ ಅವಶ್ಯಕತೆ ಇದೆ' ಎಂದು ಅವರು ಪತ್ರದಲ್ಲಿ ಒತ್ತಿ ಹೇಳಿದ್ದಾರೆ.
ಕೋವಿಡ್ ಪರೀಕ್ಷಾ ಸಂಖ್ಯೆ ಇಳಿಕೆ: ಕೇಂದ್ರದ ಕಳವಳ
0
ನವೆಂಬರ್ 25, 2021
ನವದೆಹಲಿ: ಬೇರೆ ಬೇರೆ ದೇಶಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿರುವ ಕೇಂದ್ರ ಆರೋಗ್ಯ ಸಚಿವಾಲಯವು, ಕೆಲವು ಜಿಲ್ಲೆಗಳಲ್ಲಿ ಕೋವಿಡ್ ಸೋಂಕು ಪತ್ತೆ ಪರೀಕ್ಷೆಗಳನ್ನು ಕಡಿಮೆ ಮಾಡಿರುವುದಕ್ಕೆ ಕಳವಳ ವ್ಯಕ್ತಪಡಿಸಿದೆ
Tags