HEALTH TIPS

ಪರಿಶಿಷ್ಟ ಜಾತಿ, ಪಂಗಡ ಹೊರತುಪಡಿಸಿ ಜಾತಿ ಆಧರಿಸಿ ಗಣತಿ ನಡೆದಿಲ್ಲ: ಕೇಂದ್ರ

Top Post Ad

Click to join Samarasasudhi Official Whatsapp Group

Qries

               ನವದೆಹಲಿ: ಸ್ವಾತಂತ್ರ್ಯ ನಂತರ ಪರಿಶಿಷ್ಟ ಜಾತಿ ಮತ್ತು ಪಂಗಡದವರನ್ನು ಹೊರತುಪಡಿಸಿ ಜಾತಿ ಆಧಾರದಲ್ಲಿ ಗಣತಿ ಕಾರ್ಯ ನಡೆದಿಲ್ಲ ಎಂದು ಕೇಂದ್ರ ಸರ್ಕಾರ ಮಂಗಳವಾರ ಲೋಕಸಭೆಯಲ್ಲಿ ತಿಳಿಸಿತು.

               ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿರುವ ಗೃಹ ಖಾತೆಯ ರಾಜ್ಯ ಸಚಿವ ನಿತ್ಯಾನಂದ ರಾಯ್‌, 'ಕೇಂದ್ರದ ಸಚಿವರು ಸೇರಿ ಎಲ್ಲ ಭಾಗಿದಾರರ ಅಭಿಪ್ರಾಯಗಳನ್ನು ಆಧರಿಸಿ ಗಣತಿ ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಗಿದೆ' ಎಂದಿದ್ದಾರೆ.

                 ಸಂವಿಧಾನದ (ಪರಿಶಿಷ್ಟ ಜಾತಿ) ಆದೇಶ 1950 ಮತ್ತು ಸಂವಿಧಾನದ (ಪರಿಶಿಷ್ಟ ಪಂಗಡ) ಆದೇಶ 1950ರ ಅನುಸಾರ ಆಯಾ ಕಾಲಕ್ಕೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಎಂದು ಅಧಿಸೂಚಿತವಾದ ಜಾತಿಗಳ ವಿವರಗಳನ್ನು ದಶಕಕ್ಕೆ ಒಮ್ಮೆ ನಡೆಯುವ ಗಣತಿ ಪ್ರಕ್ರಿಯೆಯಲ್ಲಿ ದಾಖಲಿಸಲಾಗುತ್ತದೆ ಎಂದೂ ಸಚಿವರು ವಿವರಿಸಿದರು.

               ಜನಗಣತಿ 2021ರ ಉದ್ದೇಶ ಕುರಿತು ಸರ್ಕಾರ ಮಾರ್ಚ್ 28, 2019ರಂದು ಗೆಜೆಟ್‌ ಅಧಿಸೂಚನೆ ಹೊರಡಿಸಿದೆ. ಆದರೆ, ಕೋವಿಡ್‌ ಕಾರಣದಿಂದ ಈ ಪ್ರಕ್ರಿಯೆಯನ್ನು ಮುಂದೂಡಲಾಗಿದೆ ಎಂದು ತಿಳಿಸಿದರು.


Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries