ಬದಿಯಡ್ಕ: ಬಹುಮುಖ ಪ್ರತಿಭೆ ಸ್ಮೃತಿ.ಎಂ, ಕಾರ್ತಿಕ್ ರಾವ್, ಅನುಷಾ ಬಾಳೆಗದ್ದೆ ಹಾಗೂ ಆದ್ಯಂತ್ ಅಡೂರು ಇವರಿಗೆ ಮಂಗಳೂರು ಶಾರದಾ ವಿದ್ಯಾಲಯದ ಸಭಾಭವನದಲ್ಲಿ ಗುರುವಾರ ಜರಗಿದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ , ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ್, ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಎಸ್.ಪ್ರದೀಪ್ ಕುಮಾರ್ ಕಲ್ಕೂರ ಹಾಗೂ ಮತ್ತಿತರ ಗಣ್ಯರ ಸಮ್ಮುಖದಲ್ಲಿ ಕಲ್ಕೂರ ಪ್ರತಿಷ್ಠಾನ ದ.ಕ.ಜಿಲ್ಲಾ ರಾಜ್ಯೋತ್ಸವ ಪುರಸ್ಕಾರ ನೀಡಿ ಅಭಿನಂದಿಸಲಾಯಿತು.