ಮಧೂರು: ಕರಾವಳಿ ಸಾಂಸ್ಕøತಿಕ ಪ್ರತಿಷ್ಠಾನದ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕದ ನೇತೃತ್ವದಲ್ಲಿ ಪಾರೆಕಟ್ಟೆಯ ಕನ್ನಡ ಗ್ರಾಮದಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ ಮತ್ತು ಕಾಸರಗೋಡು ಜಿಲ್ಲಾ ಕನ್ನಡ ದಿನಾಚರಣೆ ನಡೆಯಿತು.
ಅಧ್ಯಕ್ಷತೆ ವಹಿಸಿದ ಧಾರ್ಮಿಕ ಮುಂದಾಳು ಕೆ.ಎನ್.ವೆಂಕಟ್ರಮಣ ಹೊಳ್ಳ ಅವರು ದೀಪ ಪ್ರಜ್ವಲಿಸಿ ಉದ್ಘಾಟಿಸಿ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕøತಿಯ ಮಹತ್ವವನ್ನು ಮುಂದಿನ ತಲೆಮಾರಿಗೆ ಹಸ್ತಾಂತರಿಸುವ ಕೆಲಸ ನಡೆಯಬೇಕಾಗಿದೆ. ಪ್ರತಿಯೊಬ್ಬನಲ್ಲೂ ಕನ್ನಡ ಪ್ರಜ್ಞೆ ಮೂಡಿಸುವ ಜವಾಬ್ದಾರಿಯುತ ಕಾಯಕ ನಡೆಯಬೇಕಾಗಿದೆ ಎಂದರು.
ಕಾಸರಗೋಡು ನಗರಸಭಾ ಸದಸ್ಯೆ ಬಿ.ಶಾರದಾ, ಮಧೂರು ಗ್ರಾಮ ಪಂಚಾಯತಿ ಅಧ್ಯಕ್ಷ ಗೋಪಾಲಕೃಷ್ಣ, ರಾಮರಾಜ ಕ್ಷತ್ರಿಯ ಯಾನೆ ಕೋಟೆಯಾರ್ ಸೇವಾ ಸಂಘದ ಜಿಲ್ಲಾ ಅಧ್ಯಕ್ಷ ಕಮಲಾಕ್ಷ ಕಲ್ಲುಗದ್ದೆ, ನಿವೃತ್ತ ಅಧ್ಯಾಪಕ ವೀರೇಶ್ವರ ಭಟ್, ನಿವೃತ್ತ ಪ್ರಾಂಶುಪಾಲ ಪೆÇ್ರ.ಎ.ಶ್ರೀನಾಥ್, ಹರಿದಾಸ ಜಯಾನಂದ ಕುಮಾರ್ ಹೊಸದುರ್ಗ, ವಿದುಷಿ ಅನುಪಮಾ ರಾಘವೇಂದ್ರ ಉಡುಪಮೂಲೆ ಮೊದಲಾದವರು ಕಾಸರಗೋಡಿನಲ್ಲಿ ಕನ್ನಡ ಅಸ್ತಿತ್ವವನ್ನು ಉಳಿಸಿ ಬೆಳೆಸುವ ಕುರಿತಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಕನ್ನಡ ಪ್ರತಿಜ್ಞೆ ಕೈಗೊಳ್ಳಲಾಯಿತು. ಗಾಯಕ ದಿವಾಕರ ಅಶೋಕನಗರ ಅವರಿಂದ ಕನ್ನಡ ರಾಜ್ಯೋತ್ಸವ ಗೀತೆಗಳ ಗಾಯನ ನಡೆಯಿತು. ಕರಾವಳಿ ಸಾಂಸ್ಕøತಿಕ ಪ್ರತಿಷ್ಠಾನ ಅಧ್ಯಕ್ಷ ಶಿವರಾಮ ಕಾಸರಗೋಡು ಪ್ರಾಸ್ತಾವಿಕ ನುಡಿದು ಸ್ವಾಗತಿಸಿ, ಕಾವ್ಯ ಕುಶಲ ವಂದಿಸಿದರು.