ನವದೆಹಲಿ: ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಭಾನುವಾರ ಸರ್ವ ಪಕ್ಷ ಸಭೆಯನ್ನು ಆಯೋಜಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವ ಸಾಧ್ಯತೆಯಿರುವುದಾಗಿ ಮೂಲಗಳು ಸೋಮವಾರ ಹೇಳಿವೆ.
ನವದೆಹಲಿ: ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಭಾನುವಾರ ಸರ್ವ ಪಕ್ಷ ಸಭೆಯನ್ನು ಆಯೋಜಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವ ಸಾಧ್ಯತೆಯಿರುವುದಾಗಿ ಮೂಲಗಳು ಸೋಮವಾರ ಹೇಳಿವೆ.
ಸಂಸತ್ತಿನ ಉಭಯ ಸದನಗಳ ಎಲ್ಲಾ ರಾಜಕೀಯ ಪಕ್ಷಗಳ ಸದನದ ನಾಯಕರನ್ನು ಸಭೆಗೆ ಆಹ್ವಾನಿಸಲಾಗಿದೆ ಎಂದು ಅವು ತಿಳಿಸಿವೆ.
ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಹಿರಿಯ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಷಿ, ಸಭೆಯಲ್ಲಿ ಸರ್ಕಾರವನ್ನು ಪ್ರತಿನಿಧಿಸಲಿದ್ದಾರೆ. ರಾಜ್ಯಸಭೆ ಸಭಾಪತಿ ಎಂ. ವೆಂಕಯ್ಯ ನಾಯ್ಡು ಭಾನುವಾರ ಸಂಜೆ ಮೇಲ್ಮನೆಯ ಸದನದ ನಾಯಕರ ಸಭೆಯನ್ನು ಕರೆದಿದ್ದಾರೆ.
ಇದೇ ರೀತಿಯಲ್ಲಿ ನವೆಂಬರ್ 27 ರಂದು ಲೋಕಸಭೆಯಲ್ಲಿ ಸದನದ ನಾಯಕರುಗಳ ಸಭೆಯನ್ನು ಸ್ಪೀಕರ್ ಓಂ ಬಿರ್ಲಾ ಕರೆಯುವ ಸಾಧ್ಯತೆಯಿದೆ.