ಲಖನೌ: ಚುನಾವಣೆ ಉದ್ದೇಶಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿಲ್ಲ ಎಂದು ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಹೇಳಿದ್ದಾರೆ.
ಲಖನೌ: ಚುನಾವಣೆ ಉದ್ದೇಶಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿಲ್ಲ ಎಂದು ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಹೇಳಿದ್ದಾರೆ.
ಸಾಕ್ಷಿ ಮಹಾರಾಜ್ ಹೇಳಿಕೆಯುಳ್ಳ ವಿಡಿಯೊವನ್ನು 'ಎಎನ್‌ಐ' ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.
ಕೇಂದ್ರವು ಕಳೆದ ವರ್ಷ ರೂಪಿಸಿದ್ದ ಮೂರು ಕೃಷಿ ಕಾಯ್ದೆಗಳನ್ನು ರೈತರ ಭಾರಿ ವಿರೋಧದ ಕಾರಣ ರದ್ದುಪಡಿಸುವುದಾಗಿ ಮೋದಿ ಅವರು ಶುಕ್ರವಾರ ಘೋಷಿಸಿದ್ದರು. ಕಾಯ್ದೆಗಳ ಬಗ್ಗೆ ಒಂದು ವರ್ಗದ ರೈತರಿಗೆ ಮನವರಿಕೆ ಮಾಡಿಕೊಡುವಲ್ಲಿ ವಿಫಲರಾಗಿರುವುದಕ್ಕೆ ದೇಶದ ಜನತೆ ಬಳಿ ಕ್ಷಮೆಯನ್ನೂ ಯಾಚಿಸಿದ್ದರು.