ತನ್ನ ಹೇಳಿಕೆಯ ಮೂಲಕ ಸಮಾಜದಲ್ಲಿ ಬಿರುಕು ಮೂಡಿಸುವ ಈ ಹೇಳಿಕೆಯ ಕುರಿತು ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ನ್ಯಾಯಾಲಯವು ಪೊಲೀಸರಿಗೆ ನಿರ್ದೇಶನ ನೀಡಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೋರ್ವರು ಪಿಟಿಐಗೆ ತಿಳಿಸಿದ್ದಾರೆ. ಸದ್ಯ ಕುರುವಿಲಂಙಾಡ್ ಪೊಲೀಸರು ಬಿಷಪ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ನ ಮುಖಂಡರು ನೀಡಿದ್ದ ದೂರನ್ನು ಪರಿಗಣಿಸಿದ ಕೋರ್ಟ್ ತನಿಖೆಗೆ ಆದೇಶ ನೀಡಿದೆ. ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ನ ಕೊಟ್ಟಾಯಂ ಜಿಲ್ಲಾಧ್ಯಕ್ಷರಾದ ಅಬ್ದುಲ್ ಅಝೀಝ್ ಮೌಲವಿ ಬಿಷಪ್ ವಿರುದ್ಧ ಪ್ರಕರಣ ದಾಖಲಿಸುವಂತೆ ಅರ್ಜಿ ಸಲ್ಲಿಸಿದ್ದರು.