ರಾಯ್ಪುರ: ಹಾಕಿ ದಂತಕಥೆ ಮೇಜರ್ ಧ್ಯಾನ್ ಚಂದ್ ಅವರ ಹೆಸರನ್ನು ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ಮರುನಾಮಕರಣ ಮಾಡಿದ ಕೇಂದ್ರ ಸರ್ಕಾರದ ತೀರ್ಮಾನಕ್ಕೆ ಮುನ್ನ ಪ್ರಧಾನ ಮಂತ್ರಿ ಕಚೇರಿಗೆ ಯಾವುದೇ ಮಾಹಿತಿಯಿಲ್ಲ ಎಂದು ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ.
ಛತ್ತೀಸ್ ಗಢ ಮೂಲದ ಆರ್ ಟಿಐ ಕಾರ್ಯಕರ್ತ ಉಚಿತ್ ಶರ್ಮ ಅವರು ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಪ್ರಧಾನ ಮಂತ್ರಿ ಕಾರ್ಯಾಲಯ ದಾಖಲೆಯಲ್ಲಿ ಜನರು ಮನವಿ ಸಲ್ಲಿಸಿದ್ದ ಬಗ್ಗೆ ಯಾವುದೇ ಮಾಹಿತಿಯಿಲ್ಲ ಎಂದು ಹೇಳಿದೆ. ಪ್ರಧಾನ ಮಂತ್ರಿ ಕಚೇರಿಯಿಂದ ಬಂದ ಉತ್ತರದಿಂದ ತೃಪ್ತರಾಗದ ಅರ್ಜಿದಾರ ಉಚಿತ್ ಶರ್ಮ ಕೇಂದ್ರ ಮಾಹಿತಿ ಆಯೋಗ(ಸಿಐಸಿ)ದ ಮೊರೆ ಹೋಗಿದ್ದಾರೆ.
ವಿಷಯಕ್ಕೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಲಾಗಿದೆ. ಆರ್‌ಟಿಐ ಕಾಯ್ದೆಯಡಿಯಲ್ಲಿ 'ಮಾಹಿತಿ'ಯ ವ್ಯಾಖ್ಯಾನದ ವ್ಯಾಪ್ತಿಯನ್ನು ಮೀರಿ ವಿವರಗಳನ್ನು ಕೋರಲಾಗಿದೆ. ಸಾರ್ವಜನಿಕ ಪ್ರಾಧಿಕಾರವು ಲಭ್ಯವಿರುವ ಮತ್ತು ದಾಖಲೆಯಲ್ಲಿ ಪ್ರವೇಶಿಸಬಹುದಾದ ಮಾಹಿತಿಯನ್ನು ಮಾತ್ರ ಒದಗಿಸಲು ಬದ್ಧವಾಗಿದ್ದು ಅರ್ಜಿದಾರರು ಕೇಳಿರುವ ಪ್ರಶ್ನೆಗಳಿಗೆ ಉತ್ತರಿಸಲು ಸಾಧ್ಯವಿಲ್ಲ ಎಂದು ಪ್ರಧಾನ ಮಂತ್ರಿ ಕಚೇರಿ ಶರ್ಮ ಅವರ ಮನವಿಗೆ ಪ್ರತಿಕ್ರಿಯಿಸಿದೆ.
ಪ್ರಧಾನ ಮಂತ್ರಿ ಕಚೇರಿಯಲ್ಲಿನ ನಿರ್ದೇಶಕರು ಮತ್ತು ಮೊದಲ ಮೇಲ್ಮನವಿ ಪ್ರಾಧಿಕಾರ ಅಮ್ರಿಕ್ ಸಿಂಗ್ ಅವರು ಸಾರ್ವಜನಿಕ ಮಾಹಿತಿ ಅಧಿಕಾರಿಗೆ ದಂಡ ವಿಧಿಸುವ ಕಾರ್ಯಕರ್ತನ ಸಮರ್ಥನೆಯನ್ನು ತಿರಸ್ಕರಿಸಿದ್ದಾರೆ. ಮೊದಲ ಮೇಲ್ಮನವಿಯ ಮಟ್ಟದಲ್ಲಿ ಅಂತಹ ಮನವಿಯನ್ನು ಸ್ವೀಕರಿಸಲಾಗುವುದಿಲ್ಲ. ಅದನ್ನು ಸಿಐಸಿ ಮುಂದೆ ಸಲ್ಲಿಸಬೇಕಾಗಿದೆ ಎಂದು ಸಿಂಗ್ ತಿಳಿಸಿದರು.