HEALTH TIPS

ಹುಚ್ಚುತನವೋ ಅಥವಾ ದೇಶದ್ರೋಹವೋ?: ಕಂಗನಾ ವಿರುದ್ಧ ವರುಣ್ ಗಾಂಧಿ ಆಕ್ರೋಶ

                  ನವದೆಹಲಿ: 2014 ದೇಶಕ್ಕೆ ನಿಜವಾದ ಸ್ವತಂತ್ರ್ಯ ಸಿಕ್ಕಿದ್ದು, 1947ರಲ್ಲಿ ಸಿಕ್ಕಿದ್ದು ಭಿಕ್ಷೆ ಎಂದು ಹೇಳಿಕೆ ನೀಡಿರುವ ಬಾಲಿವುಡ್ ನಟಿ ಕಂಗನಾ ರನೌತ್ ವಿರುದ್ಧ ಬಿಜೆಪಿ ಸಂಸದ ವರುಣ್ ಗಾಂಧಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.


             ಕಂಗನಾ ಹೇಳಿಕೆಗೆ ಟ್ವೀಟ್ ಮೂಲಕ ತಿರುಗೇಟು ನೀಡಿರುವ ವರುಣ್ ಗಾಂಧಿ, ಒಮ್ಮೆ ಮಹಾತ್ಮ ಗಾಂಧಿಯವರ (Mahatma Gandhi) ತ್ಯಾಗ ಮತ್ತು ತಪಸ್ಸಿಗೆ ಅವಮಾನ, ಮತ್ತೆ ಗಾಂಧೀಜಿ ಹಂತಕನಿಗೆ ಗೌರವ. ಈಗ ಮಂಗಲ್ ಪಾಂಡೆ, ರಾಣಿ ಲಕ್ಷ್ಮೀಬಾಯಿ, ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ನೇತಾಜಿ ಸುಭಾಷ್ ಚಂದ್ರ ಬೋಸ್ ಮತ್ತು ಲಕ್ಷಾಂತರ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗದ ಬಗ್ಗೆಯೇ ತಿರಸ್ಕಾರ.

                 ಇಂಥಹ ಆಲೋಚನೆಯನ್ನು ಹುಚ್ಚುತನ ಎನ್ನಬೇಕೋ ಅಥವಾ ದೇಶದ್ರೋಹ ಎಂದು ಕರೆಯಬೇಕೋ ಎಂದು ಪ್ರಶ್ನಿಸಿ ವರುಣ್ ಗಾಂಧಿ ಟ್ವೀಟ್ ಮಾಡಿದ್ದಾರೆ.

             ಈ ಹಿಂದೆ ಟೈಮ್ಸ್ ನೌ ಸಮಿತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕಂಗನಾ ರನೌತ್, ಸ್ವಾತಂತ್ರ್ಯದ ಕುರಿತು ಮಾತನಾಡಿದ್ದರು. '1947 ರಲ್ಲಿ ಸಿಕ್ಕಿದ್ದು ಸ್ವಾತಂತ್ರ್ಯವಲ್ಲ ಅದು ಭಿಕ್ಷೆ. ನಮಗೆ ನಿಜವಾದ ಸ್ವಾತಂತ್ರ್ಯ ಸಿಕ್ಕಿದ್ದು 2014. ನಾನು ರಾಷ್ಟ್ರೀಯತೆಯ ಬಗ್ಗೆ ಮಾತನಾಡುವಾಗ, ಸೇನೆಯನ್ನು ಬೆಂಬಲಿಸಿ ಹೇಳಿಕೆ ನೀಡುವಾಗ ಮತ್ತು ನಮ್ಮ ಸಂಸ್ಕೃತಿಯನ್ನು ಬೆಂಬಲಿಸಿ ಮಾತನಾಡುವಾಗ ನಾನು ಬಿಜೆಪಿಯ (BJP) ಅಜೆಂಡಾವನ್ನು ನಡೆಸುತ್ತಿದ್ದೇನೆ ಎಂದು ಕೆಲವರು ಹೇಳುತ್ತಾರೆ. ಸಾಮಾಜಿಕ ಜಾಲತಾಣದಲ್ಲಿ ನಾನು ಕಲಾವಿದೆಯಾಗಿ ಅಲ್ಲ ಸಾಮಾನ್ಯ ಪ್ರಜೆಯಾಗಿ ಇರುತ್ತೇನೆ ಎಂದು ಹೇಳಿದ್ದರು.

              ಕಂಗನಾ ಅವರ ಈ ಹೇಳಿಕೆಗೆ ವ್ಯಾಪಕ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇದೀಗ ಬಿಜೆಪಿ ಸಂಸದ ವರುಣ್ ಗಾಂಧಿ ಕೂಡ ಪ್ರತಿಕ್ರಿಯೆ ನೀಡಿ ಕಂಗನಾ ಹೇಳಿಕೆಯನ್ನು ಖಂಡಿಸಿದ್ದಾರೆ. ಅಲ್ಲದೆ ಕಂಗನಾ ರನೌತ್ ಹೇಳಿಕೆ ಮಹಾತ್ಮಾ ಗಾಂಧಿ, ಮಂಗಲ್ ಪಾಂಡೆ, ರಾಣಿ ಲಕ್ಷ್ಮೀಬಾಯಿ, ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ನೇತಾಜಿ ಸುಭಾಷ್ ಚಂದ್ರ ಬೋಸ್ ಸೇರಿದಂತೆ ಲಕ್ಷಾಂತರ ಸ್ವಾತಂತ್ರ್ಯ ಹೋರಾಟಗಾರರಿಗೆ ಮಾಡಿರುವ ಅವಮಾನ ಎಂದು ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries