ಕಾಸರಗೋಡು: ಕಾಸರಗೋಡು ಜಿಲ್ಲೆಯ ಆರೋಗ್ಯ ವಲಯಗಳ ಚಟುವಟಿಕೆ ಅವಲೋಕನ ನಡೆಸಲು ಆಗಮಿಸಿದ್ದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಗುರುವಾರ ತೆಕ್ಕಿಲ್ ನ ಟಾಟಾ ಸರಕಾರಿ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿದರು. ಆಸ್ಪತ್ರೆಯ ವರಿಷ್ಠಾಧಿಕಾರಿ, ವೈದ್ಯರು, ಇತರ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರು ಮೊದಲಾದವರೊಂದಿಗೆ ಅವರು ಮಾತುಕತೆ ನಡೆಸಿದರು. ಮುಂದಿನ ಚಟುವಟಿಕೆಗಳ ಕುರಿತು ವರದಿ ಸಲ್ಲಿಸುವಂತೆ ಅವರು ಆಗ್ರಹಿಸಿದರು.
ಶಾಸಕ ಸಿ.ಎಚ್.ಕುಂಞಂಬು, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ್ವಆನವಾಝ್ ಪಾದೂರು, ಅಡೀಷನಲ್ ಪ್ರಧಾನ ಕಾರ್ಯದರ್ಶಿ ಡಾ.ಆಶಾ ಥಾಮಸ್, ಜತೆ ಕಾರ್ಯದರ್ಶಿ ಶ್ರೀರಾಂ ವೆಂಟಕರಾಮನ್, ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣ್ವೀರ್ ಚಂದ್ , ಪ್ರಭಾರ ಜಿಲ್ಲಾ ವೈದ್ಯಾಧಿಕಾರಿ ಡಾ.ಇ.ಮೋಹನನ್, ಸಹಾಯಕ ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್, ಟಾಟಾ ಆಸ್ಪತ್ರೆ ವರಿಷ್ಠಾಧಿಕಾರಿ ಡಾ.ಗೀತಾ ಗುರುದಾಸ್, ಆರೋಗ್ಯ ಇಲಾಖೆಯ ಇತರ ಸಿಬ್ಬಂದಿ ಜತೆಗಿದ್ದರು.