ಕಾಸರಗೋಡು: ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಕೋವಿಡ್ ಹತೋಟಿ ನಡೆಸಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಆರೋಗ್ಯ ಕಾರ್ಯಕರ್ತರು ಮತ್ತು ಸಾರ್ವಜನಿಕರಿಗೆ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಮುಕ್ತ ಪ್ರಶಂಸೆ ವ್ಯಕ್ತಪಡಿಸಿದರು.
ಕಾಞಂಗಾಡು ರಾಷ್ಟ್ರೀಯ ಆರೋಗ್ಯ ಮಿಷನ್ ಸಭಾಂಗಣದಲ್ಲಿ ನಡೆದ ಕೋವಿಡ್ ಅವಲೋಕನ ಸಭೆಯಲ್ಲಿ ಅವರು ಮಾತನಾಡಿದರು. ವಿದೇಶಗಳಲ್ಲಿ ಕೋವಿಡ್ ಮರಳಿ ತಲೆದೋರುತ್ತಿರುವ ವೇಳೆ ಕೇರಳದಲ್ಲಿ ಈ ಬಗ್ಗೆ ಹೆಚ್ಚಿನ ಜಾಗ್ರತೆ ಪಾಲಿಸಲಾಗುವುದು. ಆರೋಗ್ಯ ಪಾಲನೆ ಸೌಲಭ್ಯಗಳ ಕೊರತೆಯಿರುವ ಕಾಸರಗೋಡು ಜಿಲ್ಲೆಯಲ್ಲಿ ರೋಗಿಗಳ ಚಿಕಿತ್ಸೆಯಲ್ಲದೆ, ಪ್ರತಿಯೊಬ್ಬ ಎರಡು ಡೋಸ್ ಲಸಿಕೆ ಹಾಕಿಸಿಕೊಳ್ಳಬೇಕು. ಲಸಿಕೆ ಸ್ವೀಕಾರ ಹಿನ್ನೆಲೆಯಲ್ಲಿ ಕೋವಿಡ್‍ನಿಂದ ಮರಣ ಸಂಖ್ಯೆಯೂ ಕಡಿಮೆಯಾಗಿದೆ ಎಂದವರು ತಿಳಿಸಿದರು. ಶಾಸಕ ಇ.ಚಂದ್ರಶೇಖರನ್, ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣ್ವೀರ್ ಚಂದ್, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಪಿ.ಬಿ.ರಾಜೀವ್, ಜಿಲ್ಲಾ ಸರ್ವೆಲೆನ್ಸ್ ಅಧಿಕಾರಿ ಡಾ.ಎ.ಟಿ.ಮನೋಜ್, ಜಿಲ್ಲಾ ವೈದ್ಯಾಧಿಕಾರಿ ಡಾ.ಇ.ಮೋಹನನ್, ಎನ್.ಎಚ್.ಎಂ.ಡಿ.ಪಿ.ಎಂ. ಡಾ.ರಿಜಿತ್ ಕೃಷ್ಣನ್, ಜಿಲ್ಲಾ ಸಹಾಯಕ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್, ಪ್ರಭಾರ ಎಂ.ಸಿ.ಎಚ್. ಅಧಿಕಾರಿ ತಂಗಮಣಿ ಉಪಸ್ಥಿತರಿದ್ದರು.