ಹರಿಯಾಣ, ಪಂಜಾಬ್, ಕೇರಳ, ರಾಜಸ್ಥಾನ, ತಮಿಳುನಾಡು, ಉತ್ತರ ಪ್ರದೇಶ, ಉತ್ತರಾಖಂಡ, ದೆಹಲಿ ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ಡೆಂಗಿ ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ದಾಖಲಾಗಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ತಜ್ಞರ ತಂಡಗಳಲ್ಲಿ ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ ಮತ್ತು ರಾಷ್ಟ್ರೀಯ ವೆಕ್ಟರ್‌ಗಳಿಂದ ಹರಡುವ ರೋಗ ನಿಯಂತ್ರಣ ಕಾರ್ಯಕ್ರಮದ ಅಧಿಕಾರಿಗಳು ಸೇರಿದ್ದಾರೆ.
'ಡೆಂಗಿ ಹಾವಳಿಯನ್ನು ನಿಯಂತ್ರಿಸಲು ಸಾರ್ವಜನಿಕ ಆರೋಗ್ಯ ಕ್ರಮಗಳು ಸೇರಿದಂತೆ ತಾಂತ್ರಿಕ ಮಾರ್ಗದರ್ಶನವನ್ನು ನೀಡುವ ಮೂಲಕ ರಾಜ್ಯ ಸರ್ಕಾರಗಳಿಗೆ ಸಹಾಯ ಮಾಡಲು ಗುರುತಿಸಲಾದ ರಾಜ್ಯಗಳಿಗೆ ಕೇಂದ್ರ ತಂಡಗಳನ್ನು ನಿಯೋಜಿಸಲು ಸಕ್ಷಮ ಪ್ರಾಧಿಕಾರವು ನಿರ್ಧರಿಸಿದೆ'ಎಂದು ಒಂಬತ್ತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಮತ್ತು ಆರೋಗ್ಯ ಸೇವೆಗಳ ಮಹಾನಿರ್ದೇಶಕರಿಗೆ ಕಳುಹಿಸಲಾದ ಜ್ಞಾಪನಾ ಪತ್ರದಲ್ಲಿ ತಿಳಿಲಾಗಿದೆ.
ದೆಹಲಿಯಲ್ಲಿ ಡೆಂಗಿ ಪರಿಸ್ಥಿತಿ ಪರಿಶೀಲನೆ ಸಭೆ ಬಳಿಕ ರೋಗ ನಿಯಂತ್ರಣ ಮತ್ತು ನಿರ್ವಹಣೆಗಾಗಿ ಹೆಚ್ಚಿನ ಸಕ್ರಿಯ ಪ್ರಕರಣಗಳಿರುವ ರಾಜ್ಯಗಳಿಗೆ ತಜ್ಞರ ತಂಡಗಳನ್ನು ಕಳುಹಿಸುವಂತೆ ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವೀಯ ಅವರು ಸೋಮವಾರ ಕೇಂದ್ರ ಆರೋಗ್ಯ ಕಾರ್ಯದರ್ಶಿಗೆ ನಿರ್ದೇಶನ ನೀಡಿದ್ದರು.
ದೆಹಲಿಯಲ್ಲಿ ಈ ವರ್ಷ ಇಲ್ಲಿಯವರೆಗೆ 1,530 ಕ್ಕೂ ಹೆಚ್ಚು ಡೆಂಗಿ ಪ್ರಕರಣಗಳು ವರದಿಯಾಗಿದ್ದು, ಅದರಲ್ಲಿ ಸುಮಾರು 1,200 ಪ್ರಕರಣಗಳು ಅಕ್ಟೋಬರ್‌ನಲ್ಲೇ ದಾಖಲಾಗಿವೆ. ಇದು ಕಳೆದ ನಾಲ್ಕು ವರ್ಷಗಳಲ್ಲಿ ತಿಂಗಳ ಅತಿ ಹೆಚ್ಚು ಪ್ರಕರಣಗಳಾಗಿವೆ.