ಕಾಸರಗೋಡು: ಕೂಡ್ಲು ಶೇಷವನ ಶ್ರೀ ಸುಬ್ರಹ್ಮಣ್ಯ ಸ್ವಾಮಿದೇವಸ್ಥಾನದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಟ್ರಸ್ಟ್ ನೇತೃತ್ವದಲ್ಲಿ ಶೇಷವನ ಶ್ರೀಸುಬ್ರಹ್ಮಣ್ಯ ಸ್ವಾಮಿ ಯುವಕ ಸಂಘದ ವತಿಯಿಂದ ನಿರ್ಮಾಣಗೊಂಡಿರುವ 'ಶೇಷವನ ಸ್ಕಂದ' ಗೋಶಾಲೆಯನ್ನು ಶ್ರೀ ಎಡನೀರು ಮಠದ ಪರಮಪೂಜ್ಯ ಶ್ರೀ ಸಚ್ಚಿದಾನಂದ ಭಾರತೀ ಲೋಕಾರ್ಪಣೆಗೈದರು.
ಶೇಷವನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಟ್ರಸ್ಟ್ ಆಡಳಿತ ಮೊಕ್ತೇಸರರಾದ ಕಿರಣ್ ಪ್ರಸಾದ್ ಕೂಡ್ಲು ಅಧ್ಯಕ್ಷತೆ ವಹಿಸಿದ್ದರು. ಶ್ರೀಕ್ಷೇತ್ರದ ತಂತ್ರಿವರ್ಯರಾದ ಬ್ರಹ್ಮಶ್ರೀ ಅರವತ್ ದಾಮೋದರ ತಂತ್ರಿ, ಕುತ್ಯಾಳ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಅನುವಂಶಿಕ ಮೊಕ್ತೇಸರ ಕೆ.ಜಿ. ಶ್ಯಾನುಭೋಗ್, ಮಧೂರು ಗ್ರಾಪಂ ಅಧ್ಯಕ್ಷ ಕೆ. ಗೋಪಾಲಕೃಷ್ಣ, ಮೊಗ್ರಾಲ್ ಪುತ್ತೂರು ಗ್ರಾಮಪಂಚಾಯಿತಿ ಸದಸ್ಯ ಸಂಪತ್ ಪೆರ್ನಡ್ಕ, ಶೇಷವನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಟ್ರಸ್ಟ್ ಅನುವಂಶಿಕ ಮೊಕ್ತೇಸರ ಸದಾಶಿವ, ಶೇಷವನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಯುವಕ ಸಂಘದ ಅಧ್ಯಕ್ಷ ರಮೇಶ್ ಕಾಞÂರತ್ತಡಿ, ಶೇಷವನ ಸ್ಕಂದ ಗೋಶಾಲೆ ಸಂಚಾಲಕ ಮುರಳಿ, ನಾಗೇಂದ್ರ ಭಟ್, ರತ್ನಾ ಪಾಯಿಚ್ಚಾಲ್ ಉಪಸ್ಥಿತರಿದ್ದರು. ಈ ಸಂದರ್ಭ ನೂತನ ಗೋಶಾಲೆಯಲ್ಲಿ ಗೋವನ್ನು ಬಿಗಿದು, ಪೂಜೆ ಸಲ್ಲಿಸಿ, ಗೋಗ್ರಾಸ ನೀಡಲಾಯಿತು. ರಾಹುಲ್ ಪಾಯಿಚ್ಚಾಲ್ ಸ್ವಾಗತಿಸಿದರು. ಸನತ್ ವಂದಿಸಿದರು.