ಮಂಜೇಶ್ವರ: ಬಾಳಿಯೂರು ಸುಣ್ಣಾರದ ಶ್ರೀಅಯ್ಯಪ್ಪ ಭಜನಾ ಮಂದಿರದ ವಾರ್ಷಿಕ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಕೊಂಡೆವೂರು ಶ್ರೀನಿತ್ಯಾನಂದ ಯೋಗಾಶ್ರಮದಲ್ಲಿ ನಡೆಯಿತು.
ಆಮಂತ್ರಣ ಪತ್ರಿಕೆಯನ್ನು ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಯವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಂದಿರದ ಸಂಚಾಲಕ ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತೋಡಿ, ಮಂದಿರದ ಗುರುಸ್ವಾಮಿ ರಾಧಾಕೃಷ್ಣ ರೈ ಹೊಸಮನೆ, ಮತ್ತು ಸದಸ್ಯರು ಉಪಸ್ಥಿತರಿದ್ದರು.