ತಿರುವನಂತಪುರ: ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಹಿಳಾ ಆಯೋಗ ಜಾಗೃತ ಸಮಿತಿಗಳನ್ನು ರಚಿಸುತ್ತಿದೆ.
ಮೊದಲ ಹಂತದಲ್ಲಿ ವಾರ್ಡ್‌ಗಳ ವ್ಯಾಪ್ತಿಯಲ್ಲಿ ಜಾಗೃತ ಸಮಿತಿಗಳನ್ನು ರಚಿಸಲಾಗುತ್ತದೆ.. ಇದರ ಭಾಗವಾಗಿ ಕೋಝಿಕ್ಕೋಡ್ ಜಿಲ್ಲೆಯಲ್ಲಿ ತರಬೇತಿ ಕಾರ್ಯಕ್ರಮಗಳನ್ನು ಆರಂಭಿಸಲಾಯಿತು. ಇದರಲ್ಲಿ ಸ್ಥಳೀಯಾಡಳಿತ ಸಂಸ್ಥೆಗಳ ಅಧ್ಯಕ್ಷರು ಮತ್ತು ಸದಸ್ಯರು ಭಾಗವಹಿಸುತ್ತಾರೆ. ಜಾಗೃತ ಸಮಿತಿಗಳು ಕಾರ್ಯನಿರ್ವಹಿಸಲು ಪರಿಷ್ಕೃತ ಮಾರ್ಗಸೂಚಿಗಳನ್ನು ಶೀಘ್ರದಲ್ಲೇ ಸಿದ್ಧಪಡಿಸಲಾಗುವುದು.