ಕುಂಬಳೆ: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಇದರ ಸಹಯೋಗದಲ್ಲಿ ಕಾಸರಗೋಡು, ಮಂಜೇಶ್ವರ, ಹೊಸದುರ್ಗ ತಾಲೂಕುಗಳ ಭಜನಾ ಅಭಿಮಾನ -ಅಭಿಯಾನ ಕಾರ್ಯಕ್ರಮದಂಗವಾಗಿ ಮೂರು ತಾಲೂಕುಗಳ ಪ್ರತಿನಿಧಿಗಳ ಸಮಕ್ಷಮದಲ್ಲಿ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಗೌರವಾಧ್ಯಕ್ಷ ಹರಿದಾಸ ಜಯಾನಂದ ಕುಮಾರ್ ಹೊಸದುರ್ಗ ಮತ್ತು ಗಾಯಕ ರಾಮಕೃಷ್ಣ ಕಾಟುಕುಕ್ಕೆ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಂಗವಾಗಿ ಬೆದ್ರಡ್ಕ ಶ್ರೀ ಅಯ್ಯಪ್ಪ ಭಜನಾ ಮಂದಿರದಲ್ಲಿ ಭಜನಾ ಕಾರ್ಯಕ್ರಮ ನಡೆಯಿತು.
ಧಾರ್ಮಿಕ ಮುಂದಾಳು ಕೆ.ವೆಂಕಟ್ರಮಣ ಹೊಳ್ಳ ಕಾಸರಗೋಡು ಸಮಾರಂಭದ ಅಧ್ಯಕ್ಷತೆ ವಹಿಸಿದರು. ಭಜನಾ ಪರಿಷತ್ ಮಂಜೇಶ್ವರ ತಾಲೂಕು ಸಮಿತಿ ಅಧ್ಯಕ್ಷ ದಿನೇಶ್ ಚೆರುಗೋಳಿ ಧಾರ್ಮಿಕ ಭಾಷಣ ಮಾಡಿದರು. ಪೈವಳಿಕೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಅಚ್ಯುತ ಚೇವಾರ್, ಮಧೂರು ಗಾ.ಪಂ.ಸದಸ್ಯ ಉದಯ ಕುಮಾರ್, ಶ್ರೀ ಅಯ್ಯಪ್ಪ ಭಜನಾ ಮಂದಿರದ ಆಡಳಿತ ಸಮಿತಿ ಅಧ್ಯಕ್ಷ ಸದಾಶಿವ, ಧಾರ್ಮಿಕ ನಾಯಕ ಪುರುಷೋತ್ತಮ ನಾಯಕ್, ರಾಘವ ಪೈವಳಿಕೆ ಉಪಸ್ಥಿತರಿದ್ದರು. ಸಮಾರಂಭದಲ್ಲಿ ಮಾಧ್ಯಮ ಪ್ರಶಸ್ತಿ ವಿಜೇತ ಅಚ್ಯುತ ಚೇವಾರ್ ಅವರನ್ನು ಗೌರವಿಸಲಾಯಿತು.ಜಯಾನಂದ ಕುಮಾರ್ ಪ್ರಸ್ತಾವನೆಗೈದರು.ವಿದ್ಯಾ ಸ್ವಾಗತಿಸಿ, ಸುಜಾತ ವಂದಿಸಿದರು.