ಕೋಝಿಕ್ಕೋಡ್: ಜಾತಿ ನಿಂದನೆ ಘಟನೆಗೆ ಸಂಬಂಧಿಸಿದಂತೆ ಪಬ್ಲಿಕ್ ಪ್ರಾಸಿಕ್ಯೂಟರ್ ವಿರುದ್ಧ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೆರಿಂತಲ್ಮಣ್ಣ ಜ್ಯುಡಿಶಿಯಲ್ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ಎಪಿಪಿ ನೌಷಾದ್ ವಿರುದ್ಧ ಜಾಮೀನು ರಹಿತ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಮಾಜಿ ಮಹಾನಿರ್ದೇಶಕ ಹಾಗೂ ಪ್ರಾಸಿಕ್ಯೂಷನ್ ಆಡಳಿತಾಧಿಕಾರಿಯಾಗಿ ನೇಮಕಗೊಂಡಿದ್ದ ಬಾಬುರಾಜ್ ಅವರು ಸಲ್ಲಿಸಿದ್ದ ದೂರಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ.
ಬಾಬುರಾಜ್ ಪರಿಶಿಷ್ಟ ಜಾತಿಗೆ ಸೇರಿದವರು. ನೌಷಾದ್ ಅವರನ್ನು ಬಾಬುರಾಜ್ ಗೆ ಜಾತಿನಿಂದನೆಗೈದಿದ್ದರು. ಇದರಿಂದ ಬಾಬುರಾಜ್ ಪೊಲೀಸರಿಗೆ ದೂರು ನೀಡಿದ್ದರು.
ನಲ್ಲಲಂ ಪೆÇಲೀಸರು ನೌಶಾದ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆಯಲ್ಲಿ ಎಫ್‍ಐಆರ್ ಕೂಡ ದಾಖಲಾಗಿದೆ. ನಲ್ಲಲಂ ಪೊಲೀಸರು ಎಸ್‍ಸಿ ಮತ್ತು ಎಸ್‍ಟಿ ದೌರ್ಜನ್ಯ ಪ್ರಕರಣ ದಾಖಲಿಸಿಕೊಂಡಿದ್ದಾರೆ.