ಪಾಟ್ನಾ: ಬಿಹಾರದ ಲಖಿಸರೈ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬಾಲಿವುಡ್ ನ ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಐವರು ದೂರದ ಸಂಬಂಧಿಕರು ಸೇರಿದಂತೆ ಆರು ಮಂದಿ ಸಾವನ್ನಪ್ಪಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಎಸ್ ಯುವಿ ಕಾರು ಟ್ರಕ್ ವೊಂದಕ್ಕೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಇತರ ನಾಲ್ವರು ಗಾಯಗೊಂಡಿದ್ದಾರೆ. ಟ್ರಕ್ ಡ್ರೈವರ್ ಹಾಗೂ ಸಹಾಯಕ ಹೇಗೂ ಅಲ್ಲಿಂದ ಪರಾರಿಯಾಗಿದ್ದಾರೆ.
ಮೃತರು ಹರಿಯಾಣ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಒಪಿ ಸಿಂಗ್ ಅವರ ಸಹೋದರಿಯ ಅಂತ್ಯಕ್ರಿಯೆ ಮುಗಿಸಿಕೊಂಡು ಪಾಟ್ನಾದಿಂದ ಜಮುಯಿಗೆ ಮರಳುತ್ತಿರುವುದಾಗಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಂಗ್ ಸುಶಾಂತ್ ಸಿಂಗ್ ಅವರ ಸಹೋದರಿಯನ್ನು ವಿವಾಹವಾಗಿದ್ದಾರೆ.
ಗಾಯಾಗಳುಗಳಿಗೆ ಸಿಕಂದರ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ತದನಂತರ ಪಾಟ್ನಾದ ವೈದ್ಯಕೀಯ ಕಾಲೇಜ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.