ತಿರುವನಂತಪುರ: ರಾಜ್ಯದಲ್ಲಿ ಮಂಗಳವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಐದು ಜಿಲ್ಲೆಗಳಲ್ಲಿ ಮಂಗಳವಾರ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕೊಟ್ಟಾಯಂ, ಇಡುಕ್ಕಿ, ಪಾಲಕ್ಕಾಡ್, ಮಲಪ್ಪುರಂ ಮತ್ತು ವಯನಾಡ್ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಂಗಳವಾರ ಮತ್ತು ಬುಧವಾರ ಭಾರೀ ಮಳೆ ನಿರೀಕ್ಷಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತವು ವಾಯುಭಾರ ಕುಸಿತವಾಗಿ ಮಾರ್ಪಾಡಾಗುತ್ತಿರುವ ಹಿನ್ನೆಲೆಯಲ್ಲಿ ಮಳೆಯ ಅಬ್ಬರ ಜೋರಾಗಿದೆ.
ಬಂಗಾಳಕೊಲ್ಲಿಯಲ್ಲಿ ಸುಮಾತ್ರಾ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಹವಾಮಾನ ಇಲಾಖೆ ಪ್ರಕಾರ, ಇದು ತೀವ್ರ ಸ್ವರೂಪವಾಗಿ ಪರಿವರ್ತನೆಗೊಂಡು ತಮಿಳುನಾಡಿನ ಉತ್ತರ ಕರಾವಳಿಯನ್ನು ತಲುಪುವ ಸಾಧ್ಯತೆ ಇದೆ. ಇದರ ಪರಿಣಾಮ ಕೇರಳದಲ್ಲೂ ಭಾರೀ ಮಳೆಯಾಗಲಿದೆ.