ಕಾಸರಗೋಡು: ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ ಇದರ ವಿಂಶತಿ ವರ್ಷಾಚರಣೆಯ 9 ನೆ ಕಾರ್ಯಕ್ರಮವಾಗಿ ಭಾರತದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪಡೆದ ಹರೇಕಳ ಹಾಜಬ್ಬ ಅವರ ಕುಟೀರದಲ್ಲಿ ಅವರನ್ನು ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಹಾಜಬ್ಬ ಅವರನ್ನು ಸಂಸ್ಥೆಯ ಸಂಸ್ಥಾಪಕ ವಾಮನ್ ರಾವ್ ಬೇಕಲ್ ಹಾಗೂ ಕೋಶಾಧಿಕಾರಿ ಸಂಧ್ಯಾರಾಣಿ ಟೀಚರ್ ಫಲಪುಷ್ಪಗಳನ್ನು ನೀಡಿ ಗೌರವಿಸಿದರು. ಸಂಸ್ಥೆಯ ನಿರ್ದೇಶಕ ಪ್ರೊ.ಎ.ಶ್ರೀನಾಥ್ ಕಾಸರಗೋಡು ಶಾಲು ಹೊದಿಸಿದರು. ಜಿಲ್ಲಾ ಕನ್ನಡ ಪತ್ರಕರ್ತರ ಸಂಘದ ಅಧ್ಯಕ್ಷ ಎ.ಆರ್.ಸುಬ್ಬಯ್ಯಕಟ್ಟೆ ಹಾಜಬ್ಬ ಅವರನ್ನು ಪುಷ್ಪಹಾರ ಹಾಕಿ ಗುರುನಮನ ಸಲ್ಲಿಸಿದರು. ಹಾಜಬ್ಬ ಅವರ ಕಾಲೇಜು ಕಟ್ಟುವ ಕನಸಿಗೆ ಪೂರಕವಾಗಿ ಕನ್ನಡ ಭವನದ ಕೋಶಾಧಿಕಾರಿ ಸಂಧ್ಯಾ ಟೀಚರ್ 5000 ರೂ ಮೊತ್ತದ ಕಿರುಕಾಣಿಕೆಯನ್ನು ಈ ಸಮಯದಲ್ಲಿ ಹಾಜಬ್ಬರಿಗೆ ಹಸ್ತಾಂತರಿಸಿದರು. ಪತ್ರಕರ್ತ ಗಡಿನಾಡ ಸಾಹಿತ್ಯ ಸಾಂಸ್ಕøತಿಕ ಅಕಾಡೆಮಿಯ ಅಖಿಲೇಶ್ ನಗುಮುಗಂ ಕಾರ್ಯಕ್ರಮ ನಿರೂಪಿಸಿದರು.