ಕಾಸರಗೋಡು: ವಿಶ್ವ ಮಧುಮೇಹ ದಿನಾಚರಣೆಯ ಜಿಲ್ಲಾ ಮಟ್ಟದ ಉದ್ಘಾಟನೆ ಕಾಞಂಗಾಡು ನೆಹರೂ ಕಲಾ-ವಿಜ್ಞಾನ ಕಾಲೇಜಿನಲ್ಲಿ ಜರುಗಿತು. ಕಾಞಂಗಾಡು ನಗರಸಭೆ ಅಧ್ಯಕ್ಷೆ ಕೆ.ವಿ.ಸುಜಾತಾ ಉದ್ಘಾಟಿಸಿದರು. ಪ್ರಾಂಶುಪಾಲ ಕೆ.ಎಸ್.ಸುರೇಶ್ ಅಧ್ಯಕ್ಷತೆ ವಹಿಸಿದ್ದರು. ಸಹಾಯಕ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ದಿನಾಚರಣೆ ಸಂದೇಶ ನೀಡಿದರು. ಜಿಲ್ಲಾ ಆಸ್ಪತ್ರೆ ವರಿಷ್ಠಾಧಿಕಾರಿ ಪ್ರಕಾಶ್ ಕೆ.ವಿ.ಪ್ರಧಾನ ಭಾಷಣ ಮಾಡಿದರು. ಕಾಞಂಗಾಡು ನಗರಸಭೆ ಸ್ಥಾಯೀ ಸಮಿತಿ ಅಧ್ಯಕ್ಷೆ ಕೆ.ವಿ.ಸರಸ್ವತಿ, ವಾರ್ಡ್ ಸದಸ್ಯೆ ವಿ.ವಿ.ಶೋಭಾ, ಮಾಸ್ ಮೀಡಿಯಾ ಅಧಿಕಾರಿ ಅಬ್ದುಲ್ ಲತೀಫ್ ಮಠತ್ತಿಲ್ ಮೊದಲಾದವರು ಉಪಸ್ಥಿತರಿದ್ದರು. ಕಾರ್ಯಕ್ರಮ ಅಂಗವಾಗಿ ಜನಜಾಗೃತಿ ವಿಚಾರಸಂಕಿರಣ ನಡೆಯಿತು. ಪರಿಣತರು ಭಾಗವಹಿಸಿದರು.